ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.
ಸುಮಾರು 72 ಎಕರೆ ವಿಸ್ತೀರ್ಣದ ಮೈಸೂರು ಅರಮನೆ ಸುತ್ತ ನಿರ್ಮಾಣವಾಗಿರುವ ಕೋಟೆ ಇದಾಗಿದ್ದು, ನೂರಾರು ವರ್ಷಗಳ ಪಾರಂಪರಿಕ ಕೋಟೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕಳೆದ ಎರಡು ವರ್ಷಗಳ ಹಿಂದೆ ಅರಮನೆ ಕೋಟೆಯ ಪೂರ್ವಭಾಗದಲ್ಲಿ ಕುಸಿದಿತ್ತು. ಈ ಹಿನ್ನೆಲೆಯಲ್ಲಿ ಪಾರಂಪರಿಕತಗೆ ಧಕ್ಕೆಯಾಗದಂತೆ ಹಳೆಯ ಕಲ್ಲುಗಳನ್ನೇ ಬಳಸಿ ಕೋಟೆ ದುರಸ್ತಿ ಕಾರ್ಯ ಕೈಗೊಂಡಿದ್ದು, ಭಾರೀ ಗಾತ್ರದ ಕಲ್ಲು ಎತ್ತಲು ಕ್ರೇನ್ ಬಳಕೆ ಮಾಡಿಕೊಳ್ಳಲಾಗಿದೆ.
ಅರಮನೆಯ ಮುಖ್ಯ ದ್ವಾರದ ಜಯಮಾರ್ತಾಂಡ ಗೇಟ್‌ನ ಬಲಭಾಗದಲ್ಲಿ ಸುಮಾರು ಎರಡು ವಾರಗಳಿಂದಲೂ ದುರಸ್ತಿ ಕಾರ್ಯ ನಡೆಯುತ್ತಿದ್ದು, ಹಳೆಯ ಕಲ್ಲುಗಳು, ಸಿಮೆಂಟ್, ಮರಳು ಬಳಸಿ ಐತಿಹಾಸಿಕ ಕೋಟೆ ಮಾದರಿಯಲ್ಲೇ ನಿರ್ಮಾಣ ಕಾರ್ಯ ಮಾಡಲಾಗುತ್ತಿದೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…