Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಮೈಸೂರು | ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆಗೆ ಪೊಲೀಸ್‌ ನೋಟಿಸ್‌

ಮೈಸೂರು : ಅಕ್ಟೋಬರ್ 9 ರಂದು ನಡೆದ ಬಾಲಕಿ ಮೇಲಿನ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿ ಬಂಧನ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ರೇಣುಕಾರಾಜು ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಈ ಸಂಬಂಧ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ರೇಣುಕಾರಾಜು ಅವರಿಗೆ ಪ್ರಕರಣದ ತನಿಖಾಧಿಕಾರಿ ಹಾಗೂ ಮೈಸೂರು ನಗರ ದೇವರಾಜ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.

ನೋಟಿಸ್‌ನಲ್ಲಿ ಇರುವುದೇನು?
ದಿನಾಂಕ-09/10/2025 ರಂದು ನಜರ್‌ ಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾವು ಅಮೋಘ ಕರ್ನಾಟಕ ಎಂಬ ಸಾಮಾಜಿಕ ಜಾಲತಾಣದಲ್ಲಿ ಸದರಿ ಪ್ರಕರಣದ ನಿಜವಾದ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ. ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದೀವಿ ಎಂದು ಹೇಳಿರುವ ವಿಚಾರದಲ್ಲಿ ನಮಗೆ ವಿಶ್ವಾಸವಿಲ್ಲ ಈ ಬಗ್ಗೆ ಕೂಲಂಕುಷವಾಗಿ ತನಿಖೆಯಾಗಬೇಕು ಎಂದು ಹೇಳಿಕೆ ನೀಡಿದ್ದು, ಸದರಿ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಇದನ್ನೂ ಓದಿ:-RSS ನೋಂದಣಿ ದಾಖಲೆ ಪತ್ರ ಬಹಿರಂಗ ಪಡಿಸಲು : ಸಚಿವ ಪ್ರಿಯಾಂಕ್‌ ಖರ್ಗೆ ಸವಾಲು

ಈ ಪ್ರಕರಣವು ಘೋರ, ಅತಿ ಸೂಕ್ಷ್ಮ ಹಾಗೂ ಗಂಭೀರ ಪ್ರಕರಣವಾಗಿದ್ದು, ತನಿಖೆಯು ವೈಜ್ಞಾನಿಕವಾಗಿ ಹಾಗೂ ಪಾರದರ್ಶಕವಾಗಿ ಸರಿ ದಾರಿಯಲ್ಲಿ ಸಾಗುತ್ತಿದ್ದರೂ ನೀವು ಪೊಲೀಸ್ ಇಲಾಖೆಯ ಮೇಲೆ ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡಿ ಪ್ರಚಾರದ ಗೀಳಿಗಾಗಿ ಆಧಾರ ರಹಿತ ಹೇಳಿಕೆಯನ್ನ ನೀಡುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ನಿಮ್ಮ ಮೇಲೆ ಏಕೆ ಕ್ರಮವನ್ನು ತೆಗೆದುಕೊಳ್ಳಬಾರದು ಎಂಬುದಾಗಿ ಈ ಮೂಲಕ ನಿಮಗೆ ನೋಟಿಸ್ ನೀಡುತ್ತಿದ್ದೇವೆ. ನೋಟಿಸ್ ತಲುಪಿದ ಕೂಡಲೆ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.

Tags:
error: Content is protected !!