ಮೈಸೂರು ನಗರ

ಮೈಸೂರು| ವಶಪಡಿಸಿಕೊಂಡಿದ್ದ ವಸ್ತುಗಳನ್ನು ಮಾಲೀಕರಿಗೆ ಹಿಂತಿರುಗಿಸಿದ ಪೊಲೀಸರು

ಮೈಸೂರು: ಇಲ್ಲಿನ ಜ್ಯೋತಿನಗರದ ಡಿಆರ್‌ ಮೈದಾನದಲ್ಲಿಂದು ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದ ಸ್ವತ್ತನ್ನು ಮಾಲೀಕರಿಗೆ ಹಿಂದಿರುಗಿಸಿದರು.

ಮೈಸೂರು ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ತೀವ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಖದೀಮರನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿಂದು ಮೈಸೂರಿನ ಜ್ಯೋತಿನಗರದ ಡಿಆರ್‌ ಮೈದಾನದಲ್ಲಿಂದು ಮಾಲೀಕರಿಗೆ ಅವರವರ ಸ್ವತ್ತನ್ನು ಹಿಂದಿರುಗಿಸಲಾಯಿತು.

ಈ ಬಗ್ಗೆ ಮಾಹಿತಿ ನೀಡಿದ ಎಸಿ ವಿಷ್ಣುವರ್ಧನ್‌ ಅವರು, 06 ಸುಲಿಗೆ, 06 ಸರಗಳ್ಳತನ, 25 ಮನೆ ಕಳ್ಳತನ, 6 ಸರ್ವೆಂಟ್ ಕಳ್ಳತನ, 67 ವಾಹನ ಕಳ್ಳತನ, 15 ಸಾಮಾನ್ಯ ಕಳ್ಳತನ, 5 ಜಾನುವಾರು ಕಳ್ಳತನ, 4 ವಂಚನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಒಟ್ಟು 2,06,85,504 ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿತ್ತು.

ಈ ಹಿನ್ನೆಲೆಯಲ್ಲಿ ಇಂದು ಒಟ್ಟು 35 ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 2 ಕೆಜಿ 439 ಗ್ರಾಂ ಚಿನ್ನ, 4 ಕೆಜಿ 360 ಬೆಳ್ಳಿ ಹಾಗೂ 18 ಪ್ರಕರಣದಲ್ಲಿ 42,36,585 ರೂಪಾಯಿ ನಗದನ್ನು ಹಿಂದಿರುಗಿಸಲಾಯಿತು ಎಂದು ಮಾಹಿತಿ ನೀಡಿದರು.

ಇನ್ನು 67 ಪ್ರಕರಣದಲ್ಲಿ ಒಟ್ಟು 05 ಕಾರು, 03 ಆಟೋ, 02, ಟ್ರಾಕ್ಟರ್, 03 ಟಿಪ್ಪರ್, 03 ರೋಡ್ ರೋಲರ್, 62 ಮೊಟರ್, 06 ಹಸುಗಳು, 03 ಕುರಿಗಳನ್ನು ಬಂಧಿತ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

4 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

4 hours ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

4 hours ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

4 hours ago

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

4 hours ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

4 hours ago