ಮೈಸೂರು ನಗರ

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ ಶಿವ ದೇಗುಲಗಳಲ್ಲಿ ಸ್ವಚ್ಛತಾ ಕಾರ್ಯಗಳು, ಅಲಂಕಾರ ಮತ್ತು ಅಂತಿಮ ಸಿದ್ಧತೆಗಳು ಪೂರ್ಣಗೊಂಡಿವೆ. ಭಕ್ತರು ನಾಳಿನ ದರ್ಶನ, ಅಭಿಷೇಕ, ಭಜನೆ ಮತ್ತು ಜಾಗರಣೆಯಲ್ಲಿ ಭಾಗವಹಿಸಲು ಉತ್ಸಾಹದಿಂದ ಸಿದ್ಧರಾಗಿದ್ದಾರೆ.

ನಗರದ ಪ್ರಮುಖ ದೇವಾಲಯಗಳಲ್ಲಿ ಅರಮನೆಯ ತ್ರಿನೇಶ್ವರಸ್ವಾಮಿ ದೇವಸ್ಥಾನವು ವಿಶೇಷ ಆಕರ್ಷಣೆಯಾಗಿದೆ. ಇಲ್ಲಿ ಶಿವಲಿಂಗಕ್ಕೆ ವರ್ಷಕ್ಕೊಮ್ಮೆ ಮಾತ್ರ ಧರಿಸುವ 11 ಕೆ.ಜಿ. ತೂಕದ ಚಿನ್ನದ ಕೊಳಗ (ಮುಖವಾಡ) ಧಾರಣೆ ಮಾಡಲಾಗುತ್ತದೆ. ಭಾನುವಾರ ಬೆಳಿಗ್ಗೆ ಅಭಿಷೇಕ ಮತ್ತು ವಿಶೇಷ ಪೂಜೆಗಳ ನಂತರ ಕೊಳಗ ಧಾರಣೆ ನೆರವೇರಿಸಲಾಗುವುದು. ಬೆಳಿಗ್ಗೆ 6 ಗಂಟೆಯಿಂದಲೇ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ.

ರಾಮಾನುಜ ರಸ್ತೆಯ 108 ಲಿಂಗಗಳ ದೇಗುಲ ಮತ್ತು ಗುರುಕುಲ ಟ್ರಸ್ಟ್‌ನ 101 ಶಿವಲಿಂಗಗಳನ್ನು ಶುಚಿಗೊಳಿಸಿ ವಿಶೇಷ ಅಲಂಕಾರ ಮಾಡಲಾಗಿದೆ. ಕಾಮೇಶ್ವರ-ಕಾಮೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ ಏಕದಶಾವಾರ ರುದ್ರಾಭಿಷೇಕ, ಅಷ್ಟಾವಧಾನ ಸೇವೆ, ವಿಜಯವಿಶ್ವೇಶ್ವರಸ್ವಾಮಿ ಪ್ರಾಕಾರೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಚಾಮರಾಜಪುರಂನ ಶ್ರೀ ಪ್ರಸನ್ನ ವಿಶ್ವೇಶ್ವರ, ಕೆ.ಜಿ.ಕೊಪ್ಪಲ್ ಮತ್ತು ಮಾತೃಮಂಡಳಿ ವೃತ್ತದ ಚಂದ್ರಮೌಳೇಶ್ವರ, ವಿದ್ಯಾರಣ್ಯಪುರಂನ ರಾಮಲಿಂಗೇಶ್ವರ, ಅಶೋಕಪುರಂನ ಮುಕ್ಕಣ್ಣೇಶ್ವರ, ಕುಂಬಾರಕೊಪ್ಪಲ್ ಮತ್ತು ಲಷ್ಕರ್ ಮೊಹಲ್ಲಾದ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನಗಳಲ್ಲಿಯೂ ಸ್ವಚ್ಛತೆ, ಅಲಂಕಾರ ಮತ್ತು ರಾತ್ರಿ ಭಜನಾ ಕಾರ್ಯಕ್ರಮಗಳಿಗೆ ಸಿದ್ಧತೆ ಪೂರ್ಣಗೊಂಡಿದೆ.

ಸುತ್ತೂರು ಶ್ರೀ ಕ್ಷೇತ್ರದಲ್ಲಿ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಕರ್ತೃಗದ್ದುಗೆಯಲ್ಲಿ ಭಾನುವಾರ ಬೆಳಿಗ್ಗೆ 6ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ವಿಶೇಷ ಪೂಜೆಗಳು, ಅಖಂಡ ಭಜನೆ ನಡೆಯಲಿವೆ. ಸಂಜೆ 7ಕ್ಕೆ ಶಿವದೀಕ್ಷೆ, ರಾತ್ರಿ 9.30ಕ್ಕೆ ಬೆಳ್ಳಿರಥ ಪ್ರಾಕಾರೋತ್ಸವ ಇರುತ್ತದೆ. ಗದ್ದುಗೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಭಕ್ತಿಗೀತೆ, ಶಿವಕಥೆ, ನೀಲಗಾರರ ಮೇಳ ಮತ್ತು ಭಜನಾ ತಂಡಗಳ ಪ್ರದರ್ಶನಗಳು ಏರ್ಪಡಿಸಲಾಗಿದೆ. ಮಹದೇಶ್ವರ ಸನ್ನಿಧಿ, ಸೋಮೇಶ್ವರ, ವೀರಭದ್ರೇಶ್ವರ, ನಂಜುಂಡೇಶ್ವರ ಮತ್ತು ನಾರಾಯಣಸ್ವಾಮಿ ದೇವಸ್ಥಾನಗಳಲ್ಲಿಯೂ ವಿಶೇಷ ಪೂಜೆಗಳು ನಡೆಯಲಿವೆ.

ಹಬ್ಬದ ಹಿನ್ನೆಲೆಯಲ್ಲಿ ದೇವರಾಜ ಮಾರುಕಟ್ಟೆ, ಅಗ್ರಹಾರದ ಚಿಕ್ಕ ಮಾರುಕಟ್ಟೆ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಪೂಜಾ ಸಾಮಗ್ರಿ, ಹೂವುಗಳು (ಕಾಕಡ, ಕನಕಾಂಬರ, ಮಲ್ಲಿಗೆ, ಸೇವಂತಿಗೆ), ಹಣ್ಣುಗಳು, ವಸ್ತ್ರ, ಕುಂಕುಮ, ವಿಭೂತಿ, ಬಿಲ್ವಪತ್ರೆಗಳ ಮಾರಾಟ ಭರ್ಜರಿಯಾಗಿದೆ. ಹೂವಿನ ದರ ಏರಿಕೆಯಾಗಿದ್ದರೂ ಸಾರ್ವಜನಿಕರು ಖರೀದಿಯಲ್ಲಿ ನಿರತರಾಗಿದ್ದಾರೆ.

ಭರ್ಜರಿ ವ್ಯಾಪಾರ
ಶನಿವಾರ ಶಿವರಾತ್ರಿ ಹಬ್ಬಕ್ಕೆ ಬೇಕಾದ ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಜೋರಾಗಿತ್ತು. ನಗರದ ದೇವರಾಜ ಮಾರುಕಟ್ಟೆ, ಅಗ್ರಹಾರದ ಚಿಕ್ಕ ಮಾರುಕಟ್ಟೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವ್ಯಾಪಾರ ವಹಿವಾಟು ನಡೆಯಿತು. ಕಾಕಡ, ಕನಕಾಂಬರ, ಮಲ್ಲಿಗೆ, ಸೇವಂತಿಗೆ ಸೇರಿದಂತೆ ಹೂಗಳ ಮಾರಾಟ ಭರ್ಜರಿಯಾಗಿ ನಡೆಯಿತು. ಹಬ್ಬದ ಹಿನ್ನೆಲೆಯಲ್ಲಿ ಹೂವಿನ ದರ ಏರಿಕೆಯಾಗಿದೆ. ಬಾಳೆಹಣ್ಣು, ಕಿತ್ತಳೆ, ಸವತೆಕಾಯಿ ಸೇರಿದಂತೆ ವಿವಿಧ ಹಣ್ಣುಗಳ ಮಾರಾಟವೂ ಜೋರಾಗಿತ್ತು. ಅಲ್ಲದೆ ವಸ್ತ್ರ, ಕುಂಕುಮ, ವಿಭೂತಿ, ಬಿಲ್ವಪತ್ರೆ, ಶಿವಪೂಜೆಗೆ ಬೇಕಾಗುವ ಇತರೆ ಪೂಜಾ ಸಾಮಗ್ರಿಗಳನ್ನು ಖರೀದಿಸುವಲ್ಲಿ ಸಾರ್ವಜನಿಕರು ನಿರತರಾಗಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago