Mysore
26
overcast clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಮೈಸೂರು| ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆ ಮೇಲೆ ದಾಳಿ: ಇಬ್ಬರು ಯುವತಿಯರ ರಕ್ಷಣೆ

ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಸರಸ್ವತಿಪುರಂ ಠಾಣೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.

ಸರಸ್ವತಿಪುರಂ 14ನೇ ಮುಖ್ಯರಸ್ತೆ ಬಳಿ ಇರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ರಕ್ಷಣೆಗೊಳಗಾದ ಯುವತಿಯರು ರಾಮನಗರ ಹಾಗೂ ಬೆಂಗಳೂರು ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.

Tags: