ಮೈಸೂರು: ವಾಲ್ಮೀಕಿ ಸಮಾಜ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರು ನಗರದ ಟೌನ್‌ಹಾಲ್ ಮುಂಭಾಗ ಜಮಾಯಿಸಿದ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ಕಾರ್ಯಕರ್ತರು, ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಭೇಟಿಯಾದ ಕಿರಣ್ ಮಜುಂದಾರ್ ಶಾ
ರಮೇಶ್ ಕತ್ತಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೂಡಲೇ ರಮೇಶ್ ಕತ್ತಿ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ದೇವರಾಜ್ ಟಿ ಕಾಟೂರು, ಲೋಕೇಶ್ ಪಿಯಾ, ಮಂಜುನಾಥ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.





