ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೋರಾಟ ಸಮಿತಿಯಿಂದ ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಆಗ್ರಹಿಸಿ ಮಾ.5ರಂದು ಪ್ರತಿಭಟನೆಗೆ ಕರೆ ನೀಡಲಾಗಿದೆ.
ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡುತ್ತಿರುವುದರಿಂದ ಅಭಿವೃದ್ದಿ ಕೆಲಸಗಳು ಕುಂಠಿತವಾಗುತ್ತಿವೆ. ಆದ್ದರಿಂದ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದ್ದು ಈ ಕುರಿತು ಮುಂದಿನ ಹೋರಾಟದ ರೂಪುರೇಷಗಳ ಬಗ್ಗೆ ನಗರದ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಜಲದರ್ಶಿನಿ ಸಭಾಂಗಣದಲ್ಲಿ ಸಭೆ ನಡೆಸಲಾಗಿದೆ.
ಮಾ.5ರಂದು ಬೆಳಿಗ್ಗೆ 11 ಗಂಟೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ. ನಂತರ, ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಅಡುವುದರ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಇತಿಹಾಸ ತಜ್ಞರು ಫ್ರೊ.ನಂಜರಾಜ ಅರಸ್, ಸೋಸಲೆ ಸಿದ್ದರಾಜು, ಅರವಿಂದ್ ಶರ್ಮಾ, ಸೋಮರಾಜ ಅರಸು, ಪುಟ್ಟನಂಜಯ್ಯ ದೇವನೂರು, ಆಮ್ ಆದ್ಮಿ ಪಕ್ಷದ ರಾಮಯ್ಯ, ಕೆಆರ್‌ಎಸ್ ಪಕ್ಷದ ಮುಖಂಡರು, ಬಿಎಸ್‌ಪಿ ಪಕ್ಷದ ಮುಖಂಡರು, ಆಮ್ ಆದ್ಮಿ ಪಕ್ಷದ ಮುಖಂಡರು, ಎಸ್‌ಟಿಪಿಐ ಪಕ್ಷದ ಮುಖಂಡರು ಸಿಪಿಐ ಹಾಗೂ ಕಾರ್ಮಿಕ ಸಂಘಟನೆಯ ಮುಖಂಡರು ಪ್ರಮುಖವಾಗಿ ಭಾಗವಹಿಸಿದ್ದರು.





