ಮೈಸೂರು ನಗರ

ಮೈಸೂರು: ಪಾಲಿಕೆ ಚುನಾವಣೆ ನಡೆಸುವಂತೆ ಆಗ್ರಹಿಸಿ ಮಾ.5 ರಂದು ಪ್ರತಿಭಟನೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೋರಾಟ ಸಮಿತಿಯಿಂದ ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಆಗ್ರಹಿಸಿ ಮಾ.5ರಂದು ಪ್ರತಿಭಟನೆಗೆ ಕರೆ ನೀಡಲಾಗಿದೆ.

ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡುತ್ತಿರುವುದರಿಂದ ಅಭಿವೃದ್ದಿ ಕೆಲಸಗಳು ಕುಂಠಿತವಾಗುತ್ತಿವೆ. ಆದ್ದರಿಂದ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದ್ದು ಈ ಕುರಿತು ಮುಂದಿನ ಹೋರಾಟದ ರೂಪುರೇಷಗಳ ಬಗ್ಗೆ ನಗರದ ದೇವರಾಜ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿರುವ ಜಲದರ್ಶಿನಿ ಸಭಾಂಗಣದಲ್ಲಿ ಸಭೆ ನಡೆಸಲಾಗಿದೆ.

ಮಾ.5ರಂದು ಬೆಳಿಗ್ಗೆ 11 ಗಂಟೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ. ನಂತರ, ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಅಡುವುದರ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಭೆಯಲ್ಲಿ ಇತಿಹಾಸ ತಜ್ಞರು ಫ್ರೊ.ನಂಜರಾಜ ಅರಸ್‌, ಸೋಸಲೆ ಸಿದ್ದರಾಜು, ಅರವಿಂದ್‌ ಶರ್ಮಾ, ಸೋಮರಾಜ ಅರಸು, ಪುಟ್ಟನಂಜಯ್ಯ ದೇವನೂರು, ಆಮ್‌ ಆದ್ಮಿ ಪಕ್ಷದ ರಾಮಯ್ಯ, ಕೆಆರ್‌ಎಸ್‌ ಪಕ್ಷದ ಮುಖಂಡರು, ಬಿಎಸ್‌ಪಿ ಪಕ್ಷದ ಮುಖಂಡರು, ಆಮ್‌ ಆದ್ಮಿ ಪಕ್ಷದ ಮುಖಂಡರು, ಎಸ್‌ಟಿಪಿಐ ಪಕ್ಷದ ಮುಖಂಡರು ಸಿಪಿಐ ಹಾಗೂ ಕಾರ್ಮಿಕ ಸಂಘಟನೆಯ ಮುಖಂಡರು ಪ್ರಮುಖವಾಗಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ

ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…

5 mins ago

ಮೈಸೂರು ರೇಷ್ಮೆಗೆ ದೊಡ್ಡ ಇತಿಹಾಸವಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…

34 mins ago

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

4 hours ago

ಓದುಗರ ಪತ್ರ: ರಾಜರ ಯೋಜನೆ ಮಾದರಿಯಲ್ಲಿ ಗ್ರೇಟರ್ ಮೈಸೂರು ನಿರ್ಮಿಸಿ

ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…

4 hours ago

ಓದುಗರ ಪತ್ರ: ಸಿಗ್ನಲ್‌ನಲ್ಲಿ ವಾಹನಗಳ ಎಂಜಿನ್ ಆಫ್ ಮಾಡಿ

ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…

5 hours ago

ಓದುಗರ ಪತ್ರ: ಹುಂಡಿ ಹಣ ಸಮಾಜ ಸೇವಾ ಕಾರ್ಯಕ್ಕೆ ಬಳಕೆಯಾಗಲಿ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…

5 hours ago