ಮೈಸೂರು ನಗರ

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ ನಾಣಯ್ಯ (133), ಮೊಹಮ್ಮದ್ ಸಲ್ಮಾನ್ (126), ಎ.ಎಸ್.ಶಿವಸ್ವರೂಪ್ (123) ಅವರು ಚುನಾಯಿತರಾಗಿದ್ದಾರೆ.

ಕ್ಲಬ್‌ನಲ್ಲಿ ಖಾಲಿ ಇದ್ದ 5 ಸದಸ್ಯ ಸ್ಥಾನಗಳಿಗೆ ಮಾ.30 ರಂದು ಕ್ಲಬ್ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 9 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಸೋಮವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಡೆದ ಮತದಾನದಲ್ಲಿ ಒಟ್ಟು 201 ಮತಪತ್ರಗಳು ದಾಖಲಾಗಿತ್ತು. ಇವುಗಳಲ್ಲಿ 2 ಮತಪತ್ರಗಳು ಅನೂರ್ಜಿತಗೊಂಡಿದ್ದು, 199 ಮತಪತ್ರಗಳು ಸಿಂಧುವಾಗಿದ್ದವು. 995 ಮತಗಳನ್ನು ದಾಖಲೆಗೆ ಪರಿಗಣಿಸಲಾಯಿತು.

ಉಳಿದಂತೆ ಸ್ಪರ್ಧಾ ಕಣದಲ್ಲಿದ್ದ ಅಯ್ಯಪ್ಪ ಮಂಡೆಪಂಡ ಪೊನ್ನಪ್ಪ (110 ಮತ), ಡಾ.ಚೇತನ್ ರಾಜಣ್ಣ ಚಂದ್ರಕಾಂತ್ (87), ಜೇಡನ್ ಮಾಕ್ ಈಶ್ವರ್ (70 ), ಡಾ.ಕೆ.ಲಿಂಗರಾಜ್ (42 ಮತ) ಅವರು ಹಿನ್ನಡೆ ಅನುಭವಿಸಿದರು.

ಪ್ರಜಾಪ್ರಭುತ್ವದ ಮಾದರಿಯಲ್ಲಿ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಮತ್ತು ಮತದಾನ ಮಾಡಿದ ಸದಸ್ಯರೆಲ್ಲರಿಗೂ ಮೈಸೂರು ರೇಸ್ ಕ್ಲಬ್ ಅಭಾರಿಯಾಗಿದೆ ಎಂದು ಎಂಆರ್‌ಸಿ ಕಾರ್ಯದರ್ಶಿ ಮತ್ತು ಸಿಇಒ ಎನ್‌ಎಚ್‌ಎಸ್ ಮಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

17 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

18 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

19 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

20 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

23 hours ago