ಮೈಸೂರು ನಗರ

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌ ರಾಜ್ಯ ವಕ್ತಾರ ಎಂ.ಲಕ್ಷ್ಮಣ್, ಅಕಸ್ಮಾತ್ ಸ್ಥಳಾಂತರ ಪ್ರಕ್ರಿಯೆಗಳನ್ನು ನಡೆಸಿದರೆ, ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇಂದಿಲ್ಲಿ ಮಾಧ್ಯಮಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಮೈಸೂರು ಮಹಾರಾಜರು ನಿರ್ಮಿಸಿದ ರೈಲ್ವೆ ಗೂಡ್ಸ್‌ ಶೆಡನ್ನು ಮೈಸೂರಿನಿಂದ ಸ್ಥಳಾಂತರಿಸಲು ರಾಜವಂಸ್ಥರೇ ಆದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಮ್ಮತಿ ಸೂಚಿಸಿರುವುದು ದುರಂತದ ಸಂಗತಿ. 1882ರಲ್ಲಿ ಸುಮಾರು ಹತ್ತು ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡ ರೈಲ್ವೆ ಶೆಡ್‌ ಅನ್ನು ಸುಮಾರು 10 ಸಾವಿರ ಜನರು ಅವಲಂಬಿಸಿದ್ದಾರೆ. ಪ್ರತಿ ದಿನ 600ಕ್ಕೂ ಹೆಚ್ಚು ಟ್ರಕ್‌ ಲೋಡ್‌ ಮತ್ತು ಅನ್‌ ಲೋಡ್‌ ಆಗುತ್ತಿದೆ. ರೈಲ್ವೆ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ ರೈಲ್ವೆ ಶೆಡ್‌ನಿಂದ ವಾರ್ಷಿಕ ಸುಮಾರು 4,900 ಕೋಟಿ ರೂ. ವಹಿವಾಟು ನಡೆಯುತ್ತಿದೆ. ಇಂತಹ ಶೆಡನ್ನು ಬೇರೆ ಜಿಲ್ಲೆಗೆ ಸ್ಥಳಾಂತರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಈಗಿರುವ ರೈಲ್ವೆ ಶೆಡ್‌ ಜಾಗದಲ್ಲಿ ವಂದೇ ಮಾತರಂ ರೈಲು ನಿಲುಗಡೆಗೆ ಅವಕಾಶ ಮಾಡಲು ಶೆಡ್‌ ಸ್ಥಳಾಂತರ ಮಾಡುತ್ತಿರುವುದಾಗಿ ಹೇಳಿದ್ದಾರೆ. ಒಂದು ಟ್ರೇನ್‌ ನಿಲ್ಲಿಸಲು ಇಷ್ಟು ದೊಡ್ಡ ವ್ಯಾವಹಾರ ಕೇಂದ್ರವಾಗಿರುವ ಗೂಡ್ಸ್‌ ಶೆಡನ್ನು ಎಚ್.ಡಿ.ಕುಮಾರಸ್ವಾಮಿ ಮತ್ತು ಸೋಮಣ್ಣ ಇಬ್ಬರೂ ಸೇರಿ ಸ್ಥಳಾಂತರಕ್ಕೆ ಸಂಚು ರೂಪಿಸಿದ್ದಾರೆ ಎಂದು ಅಪಾದಿಸಿದರು.

ಕೇಂದ್ರ ಸಚಿವರಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದಿಂದ ಹೊಸದಾಗಿ ನಮಗೆ ಯೋಜನೆಗಳನ್ನು ತರುವುದನ್ನು ಬಿಟ್ಟು, ಇಲ್ಲಿರುವ ರೈಲ್ವೆ ಶೆಡನ್ನೇ ತಮ್ಮೂರಿಗೆ ಸ್ಥಳಾಂತರಿಸಲು ಮುಂದಾಗಿದ್ದಾರೆ. ಮುಂದೆ ಚಾಮುಂಡಿಬೆಟ್ಟನೂ ಸ್ಥಳಾಂತರಿಸಿಕೊಂಡರೆ ಮೈಸೂರಿನ ಜನ ಎಲ್ಲಿಗೆ ಹೋಗಬೇಕು ಎಂದು ಲೇವಡಿ ಮಾಡಿದರು.

ಈಗಾಗಲೇ ಕೂಲಿ ಕಾರ್ಮಿಕರು, ಶೆಡ್‌ ಅವಲಂಬಿದ ವರ್ಗಗಳೊಂದಿಗೆ ಸಭೆ ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ರೈಲ್ವೆ ನಿಲ್ದಾಣವನ್ನೇ ಬಂದ್‌ ಮಾಡಿ ಪ್ರತಿಭಟನೆಗೆ ಇಳಿಯುತ್ತೇವೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ಮುಖಂಡರಾದ ಶಿವಣ್ಣ, ಬಿ.ಎಂ.ರಾಮು, ಗೋಪಿನಾಥ್, ಗಿರೀಶ್, ಮಹೇಶ್, ರಾಹುಲ್ ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

2 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

2 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

2 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

2 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

3 hours ago