ಮೈಸೂರು: 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಭತ್ತ ಮತ್ತು ರಾಗಿಯನ್ನು ಖರೀದಿಸಲು ಸರ್ಕಾರವು ಕೆಳಗಿನಂತೆ ದರ ನಿಗದಿಪಡಿಸಿದೆ. ಈ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯನ್ನಾಗಿ ನೇಮಕ ಮಾಡಿ, ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ಸಾಮಾನ್ಯ ಭತ್ತಕ್ಕೆ2,369,ಗ್ರೇಡ್ ಎ ಭತ್ತಕ್ಕೆ ೨,೩೮೯ ಬೆಂಬಲ ಬೆಲೆ ಘೋಷಿಸಿದ್ದು, ಸೆ.೧೫ ರಿಂದ ಡಿ.೩೧ರವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪ್ರತಿ ಎಕರೆಗೆ ೨೫ ಕ್ವಿಂಟಲ್‌ನಂತೆ ಗರಿಷ್ಠ ೫೦ ಕ್ವಿಂಟಲ್ ಖರೀದಿ ಪ್ರಮಾಣ ಒಳಗೊಂಡಿದ್ದು, ಖರೀದಿ ಅವಽಯನ್ನು ನ.೦೧ರಿಂದ ೨೦೨೬ರ -.೨೮ರವರೆಗೆ ನಿಗದಿಪಡಿಸಿದೆ.
ರಾಗಿಗೆ ೪,೮೮೬ ಬೆಂಬಲ ಬೆಲೆ ಘೋಷಿಸಿದ್ದು, ಅ.೦೧ರಿಂದ ಡಿ.೧೫ರವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪ್ರತಿ ಎಕರೆಗೆ ೧೦ ಕ್ವಿಂಟಲ್‌ನಂತೆ ಗರಿಷ್ಠ ೫೦ ಕ್ವಿಂಟಲ್ ಖರೀದಿ ಪ್ರಮಾಣ ಒಳಗೊಂಡಿದ್ದು, ಖರೀದಿ ಅವಧಿಯನ್ನು ೨೦೨೬ರ ಜ.೦೧ರಿಂದ ಮಾ.೩೧ರವರೆಗೆ ನಿಗದಿಪಡಿಸಿದೆ.
ಇದನ್ನು ಓದಿ: ಕಾಪು | ಟೆಂಪೋ ಪಲ್ಟಿ : ಐವರು ಕಾರ್ಮಿಕರು ದುರ್ಮರಣ
ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿಯನ್ನು ಮಾರಾಟ ಮಾಡಲು ಇಚ್ಛಿಸುವ ರೈತರು ತಮ್ಮ ತಾಲ್ಲೂಕಿನಲ್ಲಿ ತೆರೆಯಲಾಗಿರುವ ಬೆಂಬಲ ಬೆಲೆ ಯೋಜನೆಯ ನೊಂದಣಿ/ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ, ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಽಕಾರಿಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ನೋಂದಣಿಗಾಗಿ ಎಪಿಎಂಸಿ ಕೇಂದ್ರಗಳಾದ ಮೈಸೂರಿನ ಬಂಡಿಪಾಳ್ಯ, ನಂಜನಗೂಡು, ಟಿ.ನರಸೀಪುರ, ಬನ್ನೂರು, ಹುಣಸೂರು, ಕೆ.ಆರ್.ನಗರ, ಸಾಲಿಗ್ರಾಮದ ಪ್ರವಾಸಿ ಮಂದಿರ (ಶ್ರೀರಾಮ ದೇವಸ್ಥಾನದ ಹತ್ತಿರ) ಚುಂಚನಕಟ್ಟೆ, ಹೆಚ್.ಡಿ.ಕೋಟೆ, ಸರಗೂರು, ಪಿರಿಯಾಪಟ್ಟಣ, ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿ ಹತ್ತಿರ, ಹಾರನಹಳ್ಳಿ ರೈತ ಸಂಪರ್ಕ ಕೇಂದ್ರ ರಾವಂದೂರು ಇಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಇದುವರೆಗೆ ೧೫೮ ರೈತರು ೫,೫೧೪ ಕ್ವಿಂಟಲ್ ಭತ್ತ ಹಾಗೂ ೧೬,೪೦೩ ರೈತರು ೩.೮೭, ೩೫೪ ಕ್ವಿಂಟಲ್ ರಾಗಿಯನ್ನು ಬೆಂಬಲ ಬೆಲೆಯಡಿ ಮಾರಾಟ ಮಾಡಲು ನೋಂದಾಯಿಸಿಕೊಂಡಿದ್ದಾರೆ.ಉಳಿದ ರೈತರು ಮಾರಾಟ ಮಾಡಲು ಇಚ್ಛಿಸಿದ್ದಲ್ಲಿ ಕೂಡಲೇ ನಿಗದಿತ ಅವಧಿಯೊಳಗೆ ತಮ್ಮ ತಾಲ್ಲೂಕು ವ್ಯಾಪ್ತಿಯ ನೊಂದಣಿ/ಖರೀದಿ ಕೇಂದ್ರಗಳಿಗೆ ಅಗತ್ಯ ದಾಖಲಾತಿಗಳೊಂದಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…