ಮೈಸೂರು ನಗರ

ಮೈಸೂರು | ಜಿಲ್ಲೆಯಲ್ಲಿ ಭತ್ತ, ರಾಗಿ ನೋಂದಣಿ ಹಾಗೂ ಖರೀದಿ ಪ್ರಾರಂಭ

ಮೈಸೂರು: 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಭತ್ತ ಮತ್ತು ರಾಗಿಯನ್ನು ಖರೀದಿಸಲು ಸರ್ಕಾರವು ಕೆಳಗಿನಂತೆ ದರ ನಿಗದಿಪಡಿಸಿದೆ. ಈ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯನ್ನಾಗಿ ನೇಮಕ ಮಾಡಿ, ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ಸಾಮಾನ್ಯ ಭತ್ತಕ್ಕೆ2,369,ಗ್ರೇಡ್ ಎ ಭತ್ತಕ್ಕೆ ೨,೩೮೯ ಬೆಂಬಲ ಬೆಲೆ ಘೋಷಿಸಿದ್ದು, ಸೆ.೧೫ ರಿಂದ ಡಿ.೩೧ರವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪ್ರತಿ ಎಕರೆಗೆ ೨೫ ಕ್ವಿಂಟಲ್‌ನಂತೆ ಗರಿಷ್ಠ ೫೦ ಕ್ವಿಂಟಲ್ ಖರೀದಿ ಪ್ರಮಾಣ ಒಳಗೊಂಡಿದ್ದು, ಖರೀದಿ ಅವಽಯನ್ನು ನ.೦೧ರಿಂದ ೨೦೨೬ರ -.೨೮ರವರೆಗೆ ನಿಗದಿಪಡಿಸಿದೆ.

ರಾಗಿಗೆ ೪,೮೮೬ ಬೆಂಬಲ ಬೆಲೆ ಘೋಷಿಸಿದ್ದು, ಅ.೦೧ರಿಂದ ಡಿ.೧೫ರವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪ್ರತಿ ಎಕರೆಗೆ ೧೦ ಕ್ವಿಂಟಲ್‌ನಂತೆ ಗರಿಷ್ಠ ೫೦ ಕ್ವಿಂಟಲ್ ಖರೀದಿ ಪ್ರಮಾಣ ಒಳಗೊಂಡಿದ್ದು, ಖರೀದಿ ಅವಧಿಯನ್ನು ೨೦೨೬ರ ಜ.೦೧ರಿಂದ ಮಾ.೩೧ರವರೆಗೆ ನಿಗದಿಪಡಿಸಿದೆ.

ಇದನ್ನು ಓದಿ:  ಕಾಪು | ಟೆಂಪೋ ಪಲ್ಟಿ : ಐವರು ಕಾರ್ಮಿಕರು ದುರ್ಮರಣ

ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿಯನ್ನು ಮಾರಾಟ ಮಾಡಲು ಇಚ್ಛಿಸುವ ರೈತರು ತಮ್ಮ ತಾಲ್ಲೂಕಿನಲ್ಲಿ ತೆರೆಯಲಾಗಿರುವ ಬೆಂಬಲ ಬೆಲೆ ಯೋಜನೆಯ ನೊಂದಣಿ/ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ, ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಽಕಾರಿಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ನೋಂದಣಿಗಾಗಿ ಎಪಿಎಂಸಿ ಕೇಂದ್ರಗಳಾದ ಮೈಸೂರಿನ ಬಂಡಿಪಾಳ್ಯ, ನಂಜನಗೂಡು, ಟಿ.ನರಸೀಪುರ, ಬನ್ನೂರು, ಹುಣಸೂರು, ಕೆ.ಆರ್.ನಗರ, ಸಾಲಿಗ್ರಾಮದ ಪ್ರವಾಸಿ ಮಂದಿರ (ಶ್ರೀರಾಮ ದೇವಸ್ಥಾನದ ಹತ್ತಿರ) ಚುಂಚನಕಟ್ಟೆ, ಹೆಚ್.ಡಿ.ಕೋಟೆ, ಸರಗೂರು, ಪಿರಿಯಾಪಟ್ಟಣ, ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿ ಹತ್ತಿರ, ಹಾರನಹಳ್ಳಿ ರೈತ ಸಂಪರ್ಕ ಕೇಂದ್ರ ರಾವಂದೂರು ಇಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಇದುವರೆಗೆ ೧೫೮ ರೈತರು ೫,೫೧೪ ಕ್ವಿಂಟಲ್ ಭತ್ತ ಹಾಗೂ ೧೬,೪೦೩ ರೈತರು ೩.೮೭, ೩೫೪ ಕ್ವಿಂಟಲ್ ರಾಗಿಯನ್ನು ಬೆಂಬಲ ಬೆಲೆಯಡಿ ಮಾರಾಟ ಮಾಡಲು ನೋಂದಾಯಿಸಿಕೊಂಡಿದ್ದಾರೆ.ಉಳಿದ ರೈತರು ಮಾರಾಟ ಮಾಡಲು ಇಚ್ಛಿಸಿದ್ದಲ್ಲಿ ಕೂಡಲೇ ನಿಗದಿತ ಅವಧಿಯೊಳಗೆ ತಮ್ಮ ತಾಲ್ಲೂಕು ವ್ಯಾಪ್ತಿಯ ನೊಂದಣಿ/ಖರೀದಿ ಕೇಂದ್ರಗಳಿಗೆ ಅಗತ್ಯ ದಾಖಲಾತಿಗಳೊಂದಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

16 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

17 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

17 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

18 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

22 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 hours ago