ಮೈಸೂರು ನಗರ

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ ತಡರಾತ್ರಿ ನಡೆದಿದೆ.

ಗೋಕುಲಂ ನಿವಾಸಿ ನಿಶಾಂತ್ (32) ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಟ್ಯಾಂಕ್ ರಾಕಿ ಸಹಚರರು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಪಬ್‌ನಲ್ಲಿ ಪಾರ್ಟಿ ಮುಗಿಸಿ ಹೊರಬರುವಾಗ ಘಟನೆ ನಡೆದಿದೆ. ಮೃತ ನಿಶಾಂತ್ ಜತೆ ಸಂದೀಪ್, ದೀಕ್ಷಿತ್ ಮೂವರು ಸ್ನೇಹಿತರಿಂದ ಪಬ್‌ನಲ್ಲಿ ಪಾರ್ಟಿ ನಡೆದಿದ್ದು, ಪಾರ್ಟಿ ಮಾಡಿ ಹೊರ ಬರುವ ವೇಳೆ
ಕ್ಷುಲ್ಲಕ ವಿಚಾರಕ್ಕೆ ನಿಶಾಂತ್ ಸ್ನೇಹಿತರು ಹಾಗೂ ಟ್ಯಾಂಕ್ ರಾಕಿ ಸಹಚರರ ನಡುವೆ ಗಲಾಟೆ ನಡೆದಿದೆ.

ಇದೇ ವೇಳೆ ಪಬ್‌ನ ಎರಡನೇ ಮಹಡಿಯಿಂದ ನಿಶಾಂತ್‌ನನ್ನು ತಳ್ಳಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಘಟನೆ ನಡೆಯುತ್ತಿದ್ದಂತೆ ಎಸ್ಕೇಪ್‌ ಆಗಿರುವ ಆರೋಪಿಗಳಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago