ಮೈಸೂರು ನಗರ

ಮೈಸೂರು | ಅಪೋಲೋ ಆಸ್ಪತ್ರೆಯಲ್ಲಿ ರೋಬೊಟಿಕ್‌ ಶಸ್ತ್ರಚಿಕಿತ್ಸೆ ಸೌಲಭ್ಯ

ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಆರೈಕೆಯಲ್ಲಿ ಸಾಧಿಸಿದ ಪ್ರಮುಖ ಮೈಲಿಗಲ್ಲು ಎಂದು ಅಪೋಲೋ ಆಸ್ಪತ್ರೆಗಳ ಕರ್ನಾಟಕ ರಾಜ್ಯ ಹಿರಿಯ ಉಪಾಧ್ಯಕ್ಷ ಎನ್.ಜಿ.ಭರತೀಶ್ ರೆಡ್ಡಿ ತಿಳಿಸಿದರು.

ನಗರದ ಅಪೋಲೋ ಆಸ್ಪತ್ರೆಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಅತ್ಯಾಧುನಿಕ ರೋಬೊಟಿಕ್ ಶಸಚಿಕಿತ್ಸೆಯ ಮೂಲಕ ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ, ಕಾರ್ಡಿಯೋಥೊರಾಸಿಕ್ ಮತ್ತು ನಾಳೀಯ ಶಸ್ತ್ರಚಿಕಿತ್ಸೆ(ಸಿಟಿವಿಎಸ್), ಇಎನ್‌ಟಿ, ಸ್ತ್ರೀರೋಗ ಶಸ್ತ್ರಚಿಕಿತ್ಸೆ, ಮೂಳೆ ಚಿಕಿತ್ಸೆ, ಆಂಕೋಲಾಜಿ, ಜಠರ ಕರುಳಿನ ಮತ್ತು ಎಚ್‌ಪಿಬಿಗೆ ಸಂಬಂಽಸಿದಂತ ರೋಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳನ್ನು ಒಂದೇ ಸೂರಿನಡಿ ನೀಡಲಾಗುತ್ತದೆ ಎಂದರು.

ರೋಬೊಟಿಕ್ ಶಸ್ತ್ರಚಿಕಿತ್ಸೆಯು ೩ಡಿ ಚಿತ್ರಣದೊಂದಿಗೆ ದೇಹದ ಸೂಕ್ಷ್ಮ ಸ್ಥಳಗಳನ್ನು ನಿಖರವಾಗಿ ನೀಡುತ್ತದೆ. ಅಲ್ಲದೇ ದೇಹದ ಸಂಕೀರ್ಣ ಅಂಗರಚನಾ ಪ್ರದೇಶಗಳನ್ನು ಸುಲಭವಾಗಿ ಕೈಗೆ ಸಿಗುವಂತೆ ಮಾಡುತ್ತದೆ. ಪ್ರಮುಖ ಅಂಗ ರಚನೆಗಳಿಗೆ ರಕ್ಷಣೆ ಒದಗಿಸುತ್ತದೆ. ಇದರಿಂದ ಕಡಿಮೆ ನೋವು, ಕಡಿಮೆ ರಕ್ತದ ನಷ್ಟ ಉಂಟಾಗುತ್ತದೆ. ಅಲ್ಲದೇ, ರೋಗಿಗಳಿಗೆ ತ್ವರಿತ ಚೇತರಿಕೆ ನೀಡುವುದರೊಂದಿಗೆ ಆಸ್ಪತ್ರೆಯ ವಾಸ್ತವ್ಯವನ್ನೂ ಕಡಿಮೆಯಾಗಿಸುತ್ತದೆ ಎಂದರು.

ಶಸ್ತ್ರಚಿಕಿತ್ಸಾ ಗ್ಯಾಸ್ಟ್ರೋ ಎಂಟರಾಲಜಿಸ್ಟ್ ಡಾ.ನೈರುತ್ಯ, ಮೂಳೆ ಶಸ್ತ್ರಚಿಕಿತ್ಸಕ ಡಾ.ವೈ.ಬಿ.ಜಯವರ್ಧನ್, ಮೂಳೆ ಶಸ್ತ್ರಚಿಕಿತ್ಸಕ ಡಾ.ಶ್ರೇಯಸ್ ಆಳ್ವಾ, ಮೂಳೆ ಶಸ್ತ್ರಚಿಕಿತ್ಸಕ ಡಾ.ನಿತಿನ್ ಶ್ರೀಚಂದ್, ಜನರಲ್ ಸರ್ಜನ್ ಡಾ.ಬಿ.ಎನ್.ಜಯಂತ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಎಂ.ಡಿ.ರಶ್ಮಿ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಎಲ್.ವಿ.ವನಿತಾ, ಸೀನಿಯರ್ ಮೂತ್ರಶಾಸ್ತ್ರಜ್ಞ ಡಾ.ಎಂ.ರಾಘವೇಂದ್ರನ್, ಮೂತ್ರಶಾಸ್ತ್ರಜ್ಞ ಡಾ.ಕಿರಣ್‌ಕುಮಾರ್ ಶೆಟ್ಟಿ, ಶಸ್ತ್ರಚಿಕಿತ್ಸಾ ಆಂಕೋಲಾಜಿಸ್ಟ್ ಡಾ.ವೈ.ರಮ್ಯಾ, ಸಿಟಿವಿಎಸ್ ಸರ್ಜನ್ ಡಾ.ಯೂಸುಫ್ ಮೊಹಮ್ಮದ್ ರಫಿ, ಲಿವರ್ ಟ್ರಾನ್ಸ್‌ಪ್ಲಾಂಟ್ ಸರ್ಜನ್ ಡಾ.ಸಾಗರ್ ನಾರಾಯಣ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

10 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

10 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

10 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

10 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

11 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

11 hours ago