ಮೈಸೂರು ನಗರ

ಮೈಸೂರು | ಡಿ.25ರಂದು ಮನುಸ್ಮೃತಿ ದಹನ ಕುರಿತು ವಿಚಾರ ಸಂಕಿರಣ

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿ ದಹಿಸಿದ 98 ನೇ ವರ್ಷದ ನೆಪದಲ್ಲಿ ಪ್ರಸ್ತುತ ಸಂವಿಧಾನ ವಿರೋಧಿ ಕೃತ್ಯಗಳ ಕುರಿತಾಗಿ ಚರ್ಚಿಸಲು ಡಿ.25ರಂದು ಬೆಳಿಗ್ಗೆ 10;30ಕ್ಕೆ ಮಾನಸಗಂಗೋತ್ರಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್.ಭಾಸ್ಕರ್ ತಿಳಿಸಿದ್ದಾರೆ.

ಸೋಮವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ವಿಚಾರ ಸಂಕಿರಣದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಮಾರಂಭ ಉದ್ಘಾಟಿಸಿ ‘ಸಮಕಾಲೀನ ವಿದ್ಯಮಾನ ಮತ್ತು ಭಾರತದ ಸಂವಿಧಾನ’ ಕುರಿತು ಮಾತನಾಡಲಿದ್ದಾರೆ. ಹಿರಿಯ ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಇದನ್ನು ಓದಿ:  ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನ ಕೊಂದ ಪೋಷಕರು

ವಿಚಾರವಾದಿ ಶಿವಸುಂದರ್ ‘ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮನುಸ್ಮತಿ ಸುಟ್ಟಿದ್ದು ಏಕೆ?’ ವಿಚಾರ ಮಂಡಿಸಲಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಡಿ.ಚಂದ್ರಶೇಖರಯ್ಯ, ಲೇಖಕ ಸಿ.ಹರಕುಮಾರ್, ಮೈಸೂರು ವಿವಿ ಸಂಶೋಧಕರ ಸಂಘದ ಉಪಾಧ್ಯಕ್ಷ ಮಲ್ಲೇಶ್ ಬಾಚಹಳ್ಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಹಿರಿಯ ವೈದ್ಯಾಧಿಕಾರಿ ಡಾ.ಎಸ್.ರಂಗನಾಥಯ್ಯ, ಹಿರಿಯ ದಲಿತ ಹೋರಾಟಗಾರ ಹರಿಹರ ಆನಂದಸ್ವಾಮಿ, ಸಂಗೀತ ವಿವಿಯಿಂದ ಗೌರವ ಡಾಕ್ಟರೇಟ್ ಪುರಸ್ಕ ತ ಜನಾರ್ಧನ್(ಜನ್ನಿ), ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಿಮ್ಮಯ್ಯ ಅವರನ್ನು ಅಭಿನಂದಿಸುವುದಾಗಿ ಹೇಳಿದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್. ಶಿವರಾಂ, ಎಡಿಜಿಪಿ ತಿಮ್ಮಯ್ಯ, ಮುಖಂಡರಾದ ಯೋಗೇಶ್ ಉಪ್ಪಾರ್, ರವಿನಂದನ್, ಎಂ.ವಿ.ಚಂದ್ರಶೇಖರ್, ಮೈಸೂರು ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಸತ್ಯನಾರಾಯಣ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

41 mins ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

2 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

2 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

2 hours ago

ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…

2 hours ago

ಜಗತ್ತಿಗೆ ಸ್ಪರ್ಧೆ ನೀಡುತ್ತಿದ್ದ ಬೆಂಗಳೂರಿನ ಮೂಲಸೌಕರ್ಯ ಹಾಳಾಗಿದೆ : ಎಚ್‌ಡಿಕೆ

ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…

2 hours ago