ಮೈಸೂರು: ಮೈಸೂರಿನ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರ್ಮಾಣವಾಗಿರುವ ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆಯನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಅನಾವರಣಗೊಳಿಸಿದರು.
ಮೈಸೂರಿನ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ನಿರ್ಮಾಣವಾಗಿರುವ ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಪ್ರತಿಮೆ ಲೋಕಾರ್ಪಣೆ ಮಾಡಲು ಸಮಯ ಕೂಡಿ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ನವೆಂಬರ್.1ರಂದೇ ಪ್ರತಿಮೆ ಅನಾವರಣಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಕೂಡ ನಡೆಸಿದ್ದರು.
ಇದನ್ನು ಓದಿ: ಮಂಡ್ಯ| ವಿ.ಸಿ.ನಾಲೆಗೆ ಬಿದ್ದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು
ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದರು. ಸಿಎಂ ಸಿದ್ದರಾಮಯ್ಯ ಜೊತೆ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವೇದಿಕೆ ಹಂಚಿಕೊಂಡಿದ್ದು ವಿಶೇಷವೆನಿಸಿತು.
ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್, ಹರೀಶ್ ಗೌಡ, ರವಿಶಂಕರ್, ಪರಿಷತ್ ಸದಸ್ಯ ಹಾಗೂ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ, ಶಿವಕುಮಾರ್, ಸಿ.ಎನ್‌ಮಂಜೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.




