ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ.
1987ರಲ್ಲಿ ಜರ್ಮನಿಯಿಂದ ತಂದ ಹೆನ್ರಿ ಮತ್ತು ಹನಿ ಜಿರಾಫೆಗಳಿಗೆ 9ನೇ ಮರಿಯಾಗಿ 2001ರ ಡಿಸೆಂಬರ್ 7ರಂದು ಜನಿಸಿದ ‘ಯುವರಾಜ’ ಪ್ರವಾಸಿಗರ ಕೈ ಆರೈಕೆಯಲ್ಲಿ ಬೆಳೆದ ಹಾಗೂ ಮೃಗಾಲಯದಲ್ಲಿ ಹೆಚ್ಚು ವರ್ಷ ಅಂದರೆ 25 ವರ್ಷಗಳ ಕಾಲ ಬದುಕಿದ ಜಿರಾಫೆಯಾಗಿದೆ.
ಹನಿ ಮತ್ತು ಹೆನ್ರಿ ಜಿರಾಫೆಗಳಿಗೆ ಜನಿಸಿದ ಕೃಷ್ಣರಾಜ, ಚಾಮರಾಜ, ನರಸಿಂಹರಾಜ ಮತ್ತು ಯುವರಾಜ ಜಿರಾಫೆಗಳಲ್ಲಿ ಈವರೆಗೆ ಹೆಚ್ಚು ಕಾಲ ಬದುಕಿದ ಜಿರಾಫೆ ಯುವರಾಜ ಜಿರಾಫೆಯಾಗಿದ್ದು, ಇದರ ಸಾವು ಮೃಗಾಲಯಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…