ಮೈಸೂರು ನಗರ

ಮೈಸೂರಿನಲ್ಲಿ ಟ್ರಾಫಿಕ್‌ ನಿರ್ವಹಣೆ ಬಗ್ಗೆ ಎಂ.ಲಕ್ಷ್ಮಣ್‌ ಅಸಮಾಧಾನ

ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಟ್ರಾಫಿಕ್‌ ನಿರ್ವಹಣೆ ಮಾಡಲು ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲಿಂದಲೋ ಪೊಲೀಸರನ್ನು ಕರೆಸಿ ಇಲ್ಲಿ ಟ್ರಾಫಿಕ್‌ ಮಾಡಲು ಬಿಟ್ಟಿದ್ದಾರೆ. ಅವರಿಗೆ ಟ್ರಾಫಿಕ್‌ ಕಂಟ್ರೋಲ್‌ ಮಾಡಲು ಸಾಧ್ಯವಾಗುತ್ತಿಲ್ಲ. ಎಲ್ಲಾ ರಸ್ತೆಗಳಲ್ಲೂ ಅದ್ವಾನವಾಗಿದೆ ಎಂದು ಕಿಡಿಕಾರಿದರು.

ಇನ್ನು ಬೆಂಗಳೂರು ಪೊಲೀಸರಿಗೆ ಟ್ರಾಫಿಕ್‌ ಬಗ್ಗೆ ತುಂಬಾ ಚೆನ್ನಾಗಿ ಗೊತ್ತು. ಆದರೆ ಹೊರಗಡೆಯವರಿಗೆ ಟ್ರಾಫಿಕ್‌ ಡ್ಯೂಟಿ ಬಗ್ಗೆ ಏನೂ ಗೊತ್ತಿಲ್ಲ. ಹೀಗಾಗಿ ಮೈಸೂರು ಹಾಗೂ ಬೆಂಗಳೂರು ಪೊಲೀಸರಿಗೆ ಟ್ರಾಫಿಕ್‌ ನಿರ್ವಹಣೆ ಮಾಡಲು ಬಿಡಬೇಕು ಎಂದು ಆಗ್ರಹಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಗರದ ಪ್ರಮುಖ ರಸ್ತೆಗಳನ್ನು ಒನ್‌ ವೇ ಮಾಡಿದ್ದಾರೆ. ಇದರಿಂದ ವ್ಯಾಪಾರಸ್ಥರಿಗೆ ತುಂಬಾ ತೊಂದರೆಯಾಗಿದೆ. ವ್ಯಾಪಾರಸ್ಥರು ವ್ಯಾಪಾರ ಮಾಡಲು ಕಷ್ಟವಾಗುತ್ತಿದೆ. ಸರಿಯಾಗಿ ಟ್ರಾಫಿಕ್‌ ಕಂಟ್ರೋಲ್‌ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

39 seconds ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

43 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

1 hour ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

2 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

2 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 hours ago