Mysore
26
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಮೈಸೂರು ವಿವಿ 106ನೇ ಘಟಿಕೋತ್ಸವ ಸಂಭ್ರಮ: 30,966 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವವು ಕ್ರಾಪರ್ಡ್‌ ಹಾಲ್‌ನಲ್ಲಿ ನೆರವೇರಿತು.

ಈ ಬಾರಿಯ ಘಟಿಕೋತ್ಸವದಲ್ಲಿ 30,966 ಅಭ್ಯರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗಿದ್ದು, ಒಟ್ಟಾರೆ ಫಲಿತಾಂಶದಲ್ಲಿ ಮಹಿಳಾ ಅಭ್ಯರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ.

ಶೈಕ್ಷಣಿಕ ಸಾಧನೆ ತೋರಿದ 213 ವಿದ್ಯಾರ್ಥಿಗಳಿಗೆ ಒಟ್ಟು 449 ಪದಕಗಳು ಹಾಗೂ 197 ನಗದು ಬಹುಮಾನಗಳನ್ನು ವಿತರಿಸಿದ ಗೌರವಿಸಲಾಯಿತು.

ಒಟ್ಟು 24,721 ಸ್ನಾತಕ ಪದವಿಗಳನ್ನು ಹಾಗೂ 5796 ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಗಳನ್ನು ಪಡೆದುಕೊಂಡರು. ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡಿದ 452 ಅಭ್ಯರ್ಥಿಗಳಿಗೆ ವಿವಿಧ ವಿಷಯಗಳಲ್ಲಿ ಪಿಎಚ್‌ಡಿ ಪದವಿಗಳನ್ನು ನೀಡಿಪ ಪುರಸ್ಕರಿಸಲಾಯಿತು.

ಇದೇ ವೇಳೆ ವಿವಿಧ ಕ್ಷೇತ್ರಗಳಲಿ ಸೇವೆ ಸಲ್ಲಿಸಿರುವ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್‌ ಪದವಿ ನೀಡಿ ಸನ್ಮಾನಿಸಲಾಯಿತು. ಹಿರಿಯ ಚಲನಚಿತ್ರ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್‌ಬಾಬು, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಶಾಮ್‌ ಭಟ್‌ ಹಾಗೂ ಪ್ರಖ್ಯಾತ ಶಿಕ್ಷಣ ತಜ್ಞ ಜಯಚಂದ್ರರಾಜು ಅವರಿಗೆ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್‌ ನೀಡಿ ಗೌರವಿಸಿತು.

ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌, ಇಸ್ರೋ ಮಾಜಿ ಅಧ್ಯಕ್ಷ ಎಸ್.ಸೋಮನಾಥ್‌, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌, ವಿವಿ ಕುಲಪತಿ ಎನ್.ಕೆ.ಲೋಕನಾಥ್‌, ಕುಲಸಚಿವೆ ಎಂ.ಕೆ.ಸವಿತಾ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

 

 

Tags:
error: Content is protected !!