ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವವು ಕ್ರಾಪರ್ಡ್ ಹಾಲ್‌ನಲ್ಲಿ ನೆರವೇರಿತು.
ಈ ಬಾರಿಯ ಘಟಿಕೋತ್ಸವದಲ್ಲಿ 30,966 ಅಭ್ಯರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗಿದ್ದು, ಒಟ್ಟಾರೆ ಫಲಿತಾಂಶದಲ್ಲಿ ಮಹಿಳಾ ಅಭ್ಯರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ.
ಶೈಕ್ಷಣಿಕ ಸಾಧನೆ ತೋರಿದ 213 ವಿದ್ಯಾರ್ಥಿಗಳಿಗೆ ಒಟ್ಟು 449 ಪದಕಗಳು ಹಾಗೂ 197 ನಗದು ಬಹುಮಾನಗಳನ್ನು ವಿತರಿಸಿದ ಗೌರವಿಸಲಾಯಿತು.
ಒಟ್ಟು 24,721 ಸ್ನಾತಕ ಪದವಿಗಳನ್ನು ಹಾಗೂ 5796 ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಗಳನ್ನು ಪಡೆದುಕೊಂಡರು. ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡಿದ 452 ಅಭ್ಯರ್ಥಿಗಳಿಗೆ ವಿವಿಧ ವಿಷಯಗಳಲ್ಲಿ ಪಿಎಚ್‌ಡಿ ಪದವಿಗಳನ್ನು ನೀಡಿಪ ಪುರಸ್ಕರಿಸಲಾಯಿತು.
ಇದೇ ವೇಳೆ ವಿವಿಧ ಕ್ಷೇತ್ರಗಳಲಿ ಸೇವೆ ಸಲ್ಲಿಸಿರುವ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಸನ್ಮಾನಿಸಲಾಯಿತು. ಹಿರಿಯ ಚಲನಚಿತ್ರ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್‌ಬಾಬು, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಶಾಮ್ ಭಟ್ ಹಾಗೂ ಪ್ರಖ್ಯಾತ ಶಿಕ್ಷಣ ತಜ್ಞ ಜಯಚಂದ್ರರಾಜು ಅವರಿಗೆ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿತು.
ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಇಸ್ರೋ ಮಾಜಿ ಅಧ್ಯಕ್ಷ ಎಸ್.ಸೋಮನಾಥ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವಿವಿ ಕುಲಪತಿ ಎನ್.ಕೆ.ಲೋಕನಾಥ್, ಕುಲಸಚಿವೆ ಎಂ.ಕೆ.ಸವಿತಾ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
ಮೈಸೂರು : ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ ಭಾರತದಲ್ಲೇ ಪ್ರಥಮವಾಗಿ ನಿರ್ಮಿಸಲಾಗಿರುವ ರಾಜೀವ್ ಗಾಂಧಿ ಡ್ರಾಗನ್ ಪಾಂಡ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹೊಸದಿಲ್ಲಿ : 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಎನ್‍ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್…
ಬೆಂಗಳೂರು : ಸಿ.ಎಂ.ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ…
ಬೆಂಗಳೂರು : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ಬೆಂಗಳೂರು ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ…
ಬೆಂಗಳೂರು : ಚಿನ್ನದ ಹುಡುಗ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಮತ್ತು JSW ಸ್ಪೋರ್ಟ್ಸ್ ಸೋಮವಾರ ತಮ್ಮ ಅಧಿಕೃತ ಪಾಲುದಾರಿಕೆಯನ್ನು…
ಮೈಸೂರು : ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…