ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನ ಪಿ.ಎಚ್‌ಡಿ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪಿಎಚ್‌ಡಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ.55%ರಷ್ಟು ಅಂಕಗಳನ್ನು ಪಡೆದಿರಬೇಕು. ಪಿಎಚ್‌ಡಿ ಪ್ರವೇಶ ಪರೀಕ್ಷೆಯನ್ನು ಬರೆಯಲು ಅಂತಿಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಅಲ್ಲದೆ ಈ ಪ್ರವೇಶ ಪರೀಕ್ಷೆಯನ್ನು 2017ರ ನಿಯಮಾವಳಿ ಅಡಿ ಸೆಕ್ಷನ್ 5.9ರ ಪ್ರಕಾರ ನಡೆಸಲಾಗುವುದು. ಪರೀಕ್ಷೆಯು ಪಾರ್ಟ್-ಎನಲ್ಲಿ 50 ಆಬ್‌ಜೆಕ್ಟೀವ್ ಮಾರ್ಕ್ಸ್‌ಗಳನ್ನು ಹೊಂದಿರುತ್ತದೆ. ಪಾರ್ಟ್-ಬಿ ನಲ್ಲಿ ಪ್ರಬಂಧ ರೀತಿಯ ಮತ್ತು ಕಿರು ಉತ್ತರದ 50 ಪ್ರಶ್ನೆಗಳನ್ನು ಹೊಂದಿದ್ದು, ಒಟ್ಟು 3 ಗಂಟೆಗಳ ಕಾಲ ಪ್ರವೇಶ ಪರೀಕ್ಷೆ ನಡೆಯಲಿದೆ.
ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 2.5 ಲಕ್ಷಗಳ ಮಿತಿಯೊಳಗೆ ಆದಾಯವಿದ್ದರೆ ಎಸ್.ಸಿ, ಎಸ್‌ಟಿ ಮತ್ತು CAT-1 ವರ್ಗದ ಜನಾಂಗದವರಿಗೆ 1,250 ರೂ. ಇರುತ್ತದೆ. 2.5 ಲಕ್ಷಗಳ ಮೇಲೆ ಆದಾಯವನ್ನು ಹೊಂದಿರುವ ಎಸ್.ಸಿ., ಎಸ್.ಟಿ., CAT-1, ಒಬಿಸಿ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 2,500 ರೂ. ಪ್ರವೇಶಾತಿ ಶುಲ್ಕವಿರುತ್ತದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 4 ರಿಂದ 24ರವರೆಗೆ https://uni-mysore.ac.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.uni-mysore.ac.in ವೆಬ್‌ಸೈಟ್ ಅಥವಾ ದೂರವಾಣಿ ಸಂಖ್ಯೆ: 0821-2419438 ಅನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…