ಮೈಸೂರು ನಗರ

ಮೈಸೂರು ವಿಶ್ವವಿದ್ಯಾನಿಲಯದ ಪಿಎಚ್‌ಡಿ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಆಹ್ವಾನ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನ ಪಿ.ಎಚ್‌ಡಿ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪಿಎಚ್‌ಡಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ.55%ರಷ್ಟು ಅಂಕಗಳನ್ನು ಪಡೆದಿರಬೇಕು. ಪಿಎಚ್‌ಡಿ ಪ್ರವೇಶ ಪರೀಕ್ಷೆಯನ್ನು ಬರೆಯಲು ಅಂತಿಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಅಲ್ಲದೆ ಈ ಪ್ರವೇಶ ಪರೀಕ್ಷೆಯನ್ನು 2017ರ ನಿಯಮಾವಳಿ ಅಡಿ ಸೆಕ್ಷನ್‌ 5.9ರ ಪ್ರಕಾರ ನಡೆಸಲಾಗುವುದು. ಪರೀಕ್ಷೆಯು ಪಾರ್ಟ್‌-ಎನಲ್ಲಿ 50 ಆಬ್‌ಜೆಕ್ಟೀವ್‌ ಮಾರ್ಕ್ಸ್‌ಗಳನ್ನು ಹೊಂದಿರುತ್ತದೆ. ಪಾರ್ಟ್‌-ಬಿ ನಲ್ಲಿ ಪ್ರಬಂಧ ರೀತಿಯ ಮತ್ತು ಕಿರು ಉತ್ತರದ 50 ಪ್ರಶ್ನೆಗಳನ್ನು ಹೊಂದಿದ್ದು, ಒಟ್ಟು 3 ಗಂಟೆಗಳ ಕಾಲ ಪ್ರವೇಶ ಪರೀಕ್ಷೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 2.5 ಲಕ್ಷಗಳ ಮಿತಿಯೊಳಗೆ ಆದಾಯವಿದ್ದರೆ ಎಸ್‌.ಸಿ, ಎಸ್‌ಟಿ ಮತ್ತು CAT-1 ವರ್ಗದ ಜನಾಂಗದವರಿಗೆ 1,250 ರೂ. ಇರುತ್ತದೆ. 2.5 ಲಕ್ಷಗಳ ಮೇಲೆ ಆದಾಯವನ್ನು ಹೊಂದಿರುವ ಎಸ್‌.ಸಿ., ಎಸ್‌.ಟಿ., CAT-1, ಒಬಿಸಿ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 2,500 ರೂ. ಪ್ರವೇಶಾತಿ ಶುಲ್ಕವಿರುತ್ತದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್‌ 4 ರಿಂದ 24ರವರೆಗೆ https://uni-mysore.ac.in ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.uni-mysore.ac.in ವೆಬ್‌ಸೈಟ್‌ ಅಥವಾ ದೂರವಾಣಿ ಸಂಖ್ಯೆ: 0821-2419438 ಅನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

14 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

15 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

16 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

16 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

16 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

19 hours ago