ಮೈಸೂರು : ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ವಿದ್ಯುತ್, ಕುಡಿಯುವ ನೀರು ಹಾಗೂ ಶೌಚಾಲಯಗಳಂತಹ ಮೂಲಸೌಕರ್ಯಗಳ ಕೊರತೆಯ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿದ ಬಂದ ಸಾಕಷ್ಟು ದೂರುಗಳು, ಆಕ್ಷೇಪಣೆಗಳಿಗೆ ಸ್ಪಂದಿಸಿ, ಕುಲಸಚಿವರಾದ ಎಂ.ಕೆ. ಸವಿತಾ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನಾ ವೇಳೆ ಹಲವು ಸಮಸ್ಯೆಗಳು ಬೆಳಕಿಗೆ ಬಂದಿದ್ದು, ತಕ್ಷಣದ ಸುಧಾರಣಾ ಕ್ರಮಗಳಿಗೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ, ಮೂಲಸೌಲಭ್ಯಗಳ ಶಾಶ್ವತ ಸುಧಾರಣೆಗಾಗಿ ನೀರಿನ ಶುದ್ಧೀಕರಣ ಘಟಕಗಳ ನವೀಕರಣ, ಶೌಚಾಲಯಗಳ ದುರಸ್ತಿ ಹಾಗೂ ಭದ್ರತಾ ವ್ಯವಸ್ಥೆ ಬಲಪಡಿಸುವ ಕೆಲಸಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ:-ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಯು.ಜಿ.ಸಿ ಮಾನ್ಯತೆ
ಮೈಸೂರು ವಿವಿ ಹಾಸ್ಟೆಲ್‌ಗಳ ಜತೆಗೆ ಮಹಾರಾಜ, ಯುವರಾಜ ಕಾಲೇಜಿಗಳ ವಸತಿ ನಿಲಯಗಳಿಗೂ ತೆರಳಿ ಸಮಸ್ಯೆ ಗಮನಿಸಲಾಗಿದೆ. ಕ್ಯಾಂಪಸ್ ನಲ್ಲಿ ವಿದ್ಯುತ್ ದೀಪದ ಸಮಸ್ಯೆ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಪಿಪಿಪಿ ಮಾದರಿಯಲ್ಲಿ ಯೋಜನೆ ಸಿದ್ಧಪಡಿಸಿ ಒಡಂಬಡಿಕೆ ಮಾಡಿಕೊಳ್ಳಲು ಮುಂದಾಗಿದ್ದೆವು. ಆದg, ಚಳಿಗಾಲವಾದ್ದರಿಂದ ಸಂಜೆ ವೇಳೆ ಬೇಗನೆ ಕತ್ತಲು ಆವರಿಸುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆ ಅರಿತು ವಿವಿಯೇ ವಿದ್ಯುತ್ ದೀಪಗಳ ದುರಸ್ತಿಗೆ ಮುಂದಾಗಿದೆ. ಒಟ್ಟು ೧೨೦ ದೀಪಗಳು ಅವಶ್ಯಕವಿದ್ದು, ಸದ್ಯ ತುರ್ತಾಗಿ ೬೦ ದೀಪಗಳನ್ನು ಅಳವಡಿಸಲು ಸೂಚಿಸಲಾಗಿದೆ ಎಂದು ವಿವರಿಸಿದರು. ವಿದ್ಯಾರ್ಥಿಗಳು ಮೂಲ ಸೌಲಭ್ಯ ಸಮಸ್ಯೆಗಳ ಬಗ್ಗೆ ಚಿಂತಿಸುವುದನ್ನ ಬಿಡಿ ಅದನ್ನ ಸರಿಪಡಿಸಲು ವಿವಿ ಮುಂದಾಗಿದೆ. ಈ ಸಂಬಂಧ ಇಂಜಿನಿಯರಿಂಗ್ ವಿಭಾಗದ ಸಿಬ್ಬಂದಿಗಳಿಗೆ ಹತ್ತು ದಿನಗಳ ಡೆಡ್ ಲೈನ್ ನಿಗದಿಪಡಿಸಲಾಗಿದೆ. ಅಷ್ಟರಲ್ಲಿ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲಾಗುವುದು. ಅದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಬಗ್ಗೆ ಗಮನ ಹರಿಸುವಂತೆ ಮನವಿ ಮಾಡಿದರು.
ಈ ನಡುವೆ, ಹಾಸ್ಟೆಲ್‌ಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವಾಸಿಸುವುದೇ ಸಮಸ್ಯೆಯ ಪ್ರಮುಖ ಕಾರಣವಾಗಿದೆ.ಅಧಿಕ ಕ್ಷೇತ್ರದಲ್ಲಿ ಪ್ರಥಮ ವರ್ಷ ವಿದ್ಯಾರ್ಥಿಗಳು ಹಾಗೂ ಹೊರ ಜಿಲ್ಲೆಗಳ ವಿದ್ಯಾರ್ಥಿಗಳು ತಾತ್ಕಾಲಿಕವಾಗಿ ಹಾಸ್ಟೆಲ್‌ಗಳಲ್ಲಿ ನೆಲೆಯೂರಿರುವುದರಿಂದ, ನೀರು, ವಿದ್ಯುತ್ ಒತ್ತಡ ಹೆಚ್ಚಿದ್ದು, ಶೌಚಾಲಯಗಳು ಮತ್ತು ಸ್ವಚ್ಛತೆಯ ಮೇಲೂ ಪರಿಣಾಮ ಬೀರಿದೆ ಎಂದರು.
ನಿಬಂಧನೆ ಉಲ್ಲಂಘಿಸಿ ಹೆಚ್ಚುವರಿ ವಾಸಿಸುವ ವಿದ್ಯಾರ್ಥಿಗಳನ್ನು ಗುರುತಿಸಿ, ತಕ್ಷಣ ತೆರವುಗೊಳಿಸುವ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ವಿದ್ಯಾರ್ಥಿಗಳ ಕಲ್ಯಾಣ ಮುಖ್ಯವಾದರೂ, ಹಾಸ್ಟೆಲ್ ಸಾಮರ್ಥ್ಯಕ್ಕಿಂತ ಮೀರಿದ ವಾಸವನ್ನು ಅನುಮತಿ ನೀಡಲಾಗುವುದಿಲ್ಲ ಎಂದು ಸ್ಪಷ್ಡಪಡಿಸಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…