ಮೈಸೂರು ನಗರ

ಮೈಸೂರು ವಿ.ವಿ | ಹೆಚ್ಚುವರಿ ವಿದ್ಯಾರ್ಥಿಗಳ ತೆರವಿಗೆ ಗಡುವು ನೀಡಿದ ಕುಲಸಚಿವೆ

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ವಿದ್ಯುತ್, ಕುಡಿಯುವ ನೀರು ಹಾಗೂ ಶೌಚಾಲಯಗಳಂತಹ ಮೂಲಸೌಕರ್ಯಗಳ ಕೊರತೆಯ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿದ ಬಂದ ಸಾಕಷ್ಟು ದೂರುಗಳು, ಆಕ್ಷೇಪಣೆಗಳಿಗೆ ಸ್ಪಂದಿಸಿ, ಕುಲಸಚಿವರಾದ ಎಂ.ಕೆ. ಸವಿತಾ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನಾ ವೇಳೆ ಹಲವು ಸಮಸ್ಯೆಗಳು ಬೆಳಕಿಗೆ ಬಂದಿದ್ದು, ತಕ್ಷಣದ ಸುಧಾರಣಾ ಕ್ರಮಗಳಿಗೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ, ಮೂಲಸೌಲಭ್ಯಗಳ ಶಾಶ್ವತ ಸುಧಾರಣೆಗಾಗಿ ನೀರಿನ ಶುದ್ಧೀಕರಣ ಘಟಕಗಳ ನವೀಕರಣ, ಶೌಚಾಲಯಗಳ ದುರಸ್ತಿ ಹಾಗೂ ಭದ್ರತಾ ವ್ಯವಸ್ಥೆ ಬಲಪಡಿಸುವ ಕೆಲಸಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ:-ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಯು.ಜಿ.ಸಿ ಮಾನ್ಯತೆ

ಮೈಸೂರು ವಿವಿ ಹಾಸ್ಟೆಲ್‌ಗಳ ಜತೆಗೆ ಮಹಾರಾಜ, ಯುವರಾಜ ಕಾಲೇಜಿಗಳ ವಸತಿ ನಿಲಯಗಳಿಗೂ ತೆರಳಿ ಸಮಸ್ಯೆ ಗಮನಿಸಲಾಗಿದೆ. ಕ್ಯಾಂಪಸ್ ನಲ್ಲಿ ವಿದ್ಯುತ್ ದೀಪದ ಸಮಸ್ಯೆ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಪಿಪಿಪಿ ಮಾದರಿಯಲ್ಲಿ ಯೋಜನೆ ಸಿದ್ಧಪಡಿಸಿ ಒಡಂಬಡಿಕೆ ಮಾಡಿಕೊಳ್ಳಲು ಮುಂದಾಗಿದ್ದೆವು. ಆದg, ಚಳಿಗಾಲವಾದ್ದರಿಂದ ಸಂಜೆ ವೇಳೆ ಬೇಗನೆ ಕತ್ತಲು ಆವರಿಸುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆ ಅರಿತು ವಿವಿಯೇ ವಿದ್ಯುತ್ ದೀಪಗಳ ದುರಸ್ತಿಗೆ ಮುಂದಾಗಿದೆ. ಒಟ್ಟು ೧೨೦ ದೀಪಗಳು ಅವಶ್ಯಕವಿದ್ದು, ಸದ್ಯ ತುರ್ತಾಗಿ ೬೦ ದೀಪಗಳನ್ನು ಅಳವಡಿಸಲು ಸೂಚಿಸಲಾಗಿದೆ ಎಂದು ವಿವರಿಸಿದರು. ವಿದ್ಯಾರ್ಥಿಗಳು ಮೂಲ ಸೌಲಭ್ಯ ಸಮಸ್ಯೆಗಳ ಬಗ್ಗೆ ಚಿಂತಿಸುವುದನ್ನ ಬಿಡಿ ಅದನ್ನ ಸರಿಪಡಿಸಲು ವಿವಿ ಮುಂದಾಗಿದೆ. ಈ ಸಂಬಂಧ ಇಂಜಿನಿಯರಿಂಗ್ ವಿಭಾಗದ ಸಿಬ್ಬಂದಿಗಳಿಗೆ ಹತ್ತು ದಿನಗಳ ಡೆಡ್ ಲೈನ್ ನಿಗದಿಪಡಿಸಲಾಗಿದೆ. ಅಷ್ಟರಲ್ಲಿ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲಾಗುವುದು. ಅದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಬಗ್ಗೆ ಗಮನ ಹರಿಸುವಂತೆ ಮನವಿ ಮಾಡಿದರು.

ಈ ನಡುವೆ, ಹಾಸ್ಟೆಲ್‌ಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವಾಸಿಸುವುದೇ ಸಮಸ್ಯೆಯ ಪ್ರಮುಖ ಕಾರಣವಾಗಿದೆ.ಅಧಿಕ ಕ್ಷೇತ್ರದಲ್ಲಿ ಪ್ರಥಮ ವರ್ಷ ವಿದ್ಯಾರ್ಥಿಗಳು ಹಾಗೂ ಹೊರ ಜಿಲ್ಲೆಗಳ ವಿದ್ಯಾರ್ಥಿಗಳು ತಾತ್ಕಾಲಿಕವಾಗಿ ಹಾಸ್ಟೆಲ್‌ಗಳಲ್ಲಿ ನೆಲೆಯೂರಿರುವುದರಿಂದ, ನೀರು, ವಿದ್ಯುತ್ ಒತ್ತಡ ಹೆಚ್ಚಿದ್ದು, ಶೌಚಾಲಯಗಳು ಮತ್ತು ಸ್ವಚ್ಛತೆಯ ಮೇಲೂ ಪರಿಣಾಮ ಬೀರಿದೆ ಎಂದರು.

ನಿಬಂಧನೆ ಉಲ್ಲಂಘಿಸಿ ಹೆಚ್ಚುವರಿ ವಾಸಿಸುವ ವಿದ್ಯಾರ್ಥಿಗಳನ್ನು ಗುರುತಿಸಿ, ತಕ್ಷಣ ತೆರವುಗೊಳಿಸುವ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ವಿದ್ಯಾರ್ಥಿಗಳ ಕಲ್ಯಾಣ ಮುಖ್ಯವಾದರೂ, ಹಾಸ್ಟೆಲ್ ಸಾಮರ್ಥ್ಯಕ್ಕಿಂತ ಮೀರಿದ ವಾಸವನ್ನು ಅನುಮತಿ ನೀಡಲಾಗುವುದಿಲ್ಲ ಎಂದು ಸ್ಪಷ್ಡಪಡಿಸಿದರು.

ಆಂದೋಲನ ಡೆಸ್ಕ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

7 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

7 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

8 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

8 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

9 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

9 hours ago