ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶ ನಿರ್ಬಂಧ ಸೇರಿದಂತೆ ಹಲವಾರು ಮಹತ್ವದ ತೀರ್ಮಾನಗಳನ್ನು ಮೈಸೂರು ವಿಶ್ವವಿದ್ಯಾನಿಲಯವು ಕೈಗೊಂಡಿದೆ.
ಮಾನಸಗಂಗೋತ್ರಿ ಕ್ಯಾಂಪಸ್, ಯುವರಾಜ, ಮಹಾರಾಜ ಕಾಲೇಜು ಆವರಣದಲ್ಲಿ ಶಿಸ್ತನ್ನು ತರುವ ಜತೆಗೆ ಅನಧಿಕೃತ ಹೊರಗಿನ ವ್ಯಕ್ತಿಗಳ ಪ್ರವೇಶಕ್ಕೆ ಕಡಿವಾಣ ಹಾಕಲು ವಿ.ವಿ ಕೊನೆಗೂ ಚಾಟಿ ಬೀಸಿದೆ. ಮೈಸೂರು ವಿವಿ ಕ್ರಾಫರ್ಡ್ ಹಾಲ್‌ನಲ್ಲಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅಧ್ಯಕ್ಷತೆಯಲ್ಲಿ ಶನಿವಾರ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಯ ಅಧಿಕಾರಿಗಳೊಂದಿಗೆ ನಡೆದ ಸಮನ್ವಯ ಸಭೆಯಲ್ಲಿ ಹಲವಾರು ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಿ ತೀರ್ಮಾನಿಸಲಾಯಿತು.
ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳನ್ನು ನಿಷೇಧಿಸುವುದರ ಅಥವಾ ನಿಯಂತ್ರಣದಲ್ಲಿರುವ ಜತೆಗೆ, ಹೊರಗಿನ ವ್ಯಕ್ತಿಗಳು ಮತ್ತು ಸಂಘಟನೆಗಳಿಗೆ ವಿಶ್ವವಿದ್ಯಾನಿಲಯದ ಕ್ಯಾಂಪಸ್ ಪ್ರವೇಶಿಸುವುದನ್ನು ನಿಷೇಧಿಸಲಾಗುತ್ತಿದೆ. ಮಾನಸಗಂಗೋತ್ರಿ ಆವರಣದಲ್ಲಿ ಫ್ಲೆಕ್ಸ್‌ಗಳನ್ನುತೆರವುಗೊಳಿಸುವುದಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದರ ಜತೆಗೆ, ಚಿಕ್ಕಪುಟ್ಟ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ಹೂಡುವುದನ್ನು ಮತ್ತು ಚಿಕ್ಕಪುಟ್ಟ ಲೋಪಗಳಿಗೂ ವಿದ್ಯಾರ್ಥಿಗಳು ಪ್ರತಿಭಟನೆ ಹಮ್ಮಿಕೊಂಡು ವಿಶ್ವವಿದ್ಯಾನಿಲಯದ ಘನತೆಗೆ ಧಕ್ಕೆಯಾಗುವುದನ್ನು ತಡೆಯುವುದನ್ನು ಮಾಡಲಾಗುತ್ತಿದೆ. ವಿದ್ಯಾರ್ಥಿ ಸಂಘಟನೆಗಳು, ಇನ್ನಿತರ ವ್ಯಕ್ತಿಗಳು ಮತ್ತು ಸಂಘಟನೆಗಳು ಆಡಳಿತದ ನಿರ್ಧಾರಗಳಲ್ಲಿ ಮಧ್ಯೆ ಪ್ರವೇಶಿಸುವುದನ್ನು ನಿಷೇಧಿಸುವುದು. ವಿದ್ಯಾರ್ಥಿ ಸಂಘಟನೆಗಳು ನಿಯಮಾನುಸಾರದ ತಮ್ಮ ಶೈಕ್ಷಣಿಕ ಅಗತ್ಯದ ಬೇಡಿಕೆಗಳಿಗೆ ಪ್ರತಿಭಟನೆ, ಮುಷ್ಕರಗಳನ್ನು ಹೂಡದೆ ಲಿಖಿತವಾಗಿ ಸಂಬಂಧಪಟ್ಟ ಮುಖ್ಯಸ್ಥರ ಮೂಲಕ ಮನವಿ ಸಲ್ಲಿಸುವಂತೆ ಸೂಚಿಸಲಾಗುತ್ತಿದೆ.
ಇದನ್ನೂ ಓದಿ:-ವಿಶೇಷ ಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧ
ವಿಶ್ವವಿದ್ಯಾನಿಲಯದ ಆವರಣದಲ್ಲಿ ಶಿಸ್ತಿನಿಂದ ಇರಲು ವ್ಯಸನಮುಕ್ತ ಕ್ಯಾಂಪಸ್ ಮಾಡಲು ಆಗಿಂದಾಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಆಯೋಜಿಸುವುದು, ಗಂಗೋತ್ರಿ ಕ್ಯಾಂಪಸ್ ಸುರಕ್ಷತೆ, ವಿದ್ಯಾರ್ಥಿನಿಲಯಗಳ ಮೇಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀವ್ರ ನಿಗಾ ಇರಿಸುವುದು. ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸುವುದರ ಜತೆಗೆ, ಕಾನೂನುಬಾಹಿರ ವಸ್ತುಗಳ ಮೂಲವನ್ನು ನಿಷೇಧಿಸುವುದು. ಸಾರ್ವಜನಿಕರ ವಾಹನಗಳು ಮಾನಸಗಂಗೋತ್ರಿಯ ಒಳಗೆ ನಿಷೇಧಿಸುವುದು, ಘಟಿಕೋತ್ಸವ-೨೦೨೬ಕ್ಕೆ ಸೂಕ್ತ ಬಂದೋಬಸ್ತ್ ಒದಗಿಸುವುದಕ್ಕೆ ತೀರ್ಮಾನಿಸಲಾಯಿತು. ಶಿಕ್ಷಕರು, ಅಧಿಕಾರಿ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲಾಗುತ್ತಿರುವುದರ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಯಿತು.
ಕುಲಸಚಿವರಾದ ಎಂ.ಕೆ.ಸವಿತ, ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ನಾಗರಾಜು, ಹಣಕಾಸು ಅಧಿಕಾರಿ ಕೆ.ಎಸ್.ರೇಖಾ, ಪೊಲೀಸ್ ಅಧಿಕಾರಿಗಳಾದ ಕುಮಾರ್, ಬಿ.ಎಸ್.ರವಿಶಂಕರ್, ಲಕ್ಕಪ್ಪಕುಕ್ಕಡಿ, ಭವ್ಯ, ವಿವಿ ಆಡಳಿತಾಧಿಕಾರಿ, ನಿರ್ದೇಶಕರು, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು, ವಿವಿಧ ನಿಕಾಯಗಳ ಡೀನ್‌ಗಳು, ವಿಭಾಗಗಳ ನಿರ್ದೇಶಕರು, ಘಟಕ ಕಾಲೇಜುಗಳ ಮುಖ್ಯಸ್ಥರು, ಕಾರ್ಯಪಾಲಕ ಅಭಿಯಂತರರು, ಭದ್ರತಾಧಿಕಾರಿಗಳು, ಉಪ ಕುಲಸಚಿವರು ಹಾಜರಿದ್ದರು.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…