ಮೈಸೂರು ನಗರ

ಮೈಸೂರು | ಸೆಸ್ಕ್ ಕಚೇರಿಯಲ್ಲಿ ಮೇಲ್ದರ್ಜೆಗೇರಿಸಿದ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಉದ್ಘಾಟನೆ

ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮಹತ್ವದ ಹೆಜ್ಜೆ ಇರಿಸಿದ್ದು, ನಿಗಮದ ಕಚೇರಿಯ ಆವರಣದಲ್ಲಿ ವಿದ್ಯುತ್ ವಾಹನಗಳಿಗಾಗಿ(ಇವಿ) ಮೇಲ್ದರ್ಜೆಗೇರಿಸಿದ ಅತ್ಯಾಧುನಿಕ 30 ಕೆವಿ ಫಾಸ್ಟ್ ಚಾರ್ಜಿಂಗ್ ಘಟಕವನ್ನು ಉದ್ಘಾಟಿಸಲಾಯಿತು.

ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್‌ ನಿಗಮ ಕಚೇರಿಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೆಸ್ಕ್‌ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹಾಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಈ ಚಾರ್ಜಿಂಗ್ ಘಟಕವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ರಮೇಶ್‌ ಬಂಡಿಸಿದ್ದೇಗೌಡ, “ಇತ್ತೀಚೆಗೆ ಎಲೆಕ್ಟ್ರಿಕ್‌ ವಾಹನಗಳ ಬಳಕೆ ಪ್ರಮಾಣ ಹೆಚ್ಚಾಗುತ್ತಿದ್ದು, ನಿಗಮದ ವತಿಯಿಂದ ಇವಿ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುತ್ತಿದೆ. ಇದರಿಂದ ವಾಯುಮಾಲಿನ್ಯ ತಡೆಯುವ ಜತೆಗೆ ಇಂಧನದ ಆಮದು ಅವಲಂಬನೆ ತಗ್ಗಿಸಿ, ಹಸಿರು ಶಕ್ತಿಯ ಬಳಕೆಯನ್ನು ಉತ್ತೇಜಿಸಲು ಪ್ರೋತ್ಸಾಹ ನೀಡಿದಂತಾಗುತ್ತದೆ,” ಎಂದರು.

ಇದನ್ನು ಓದಿ: ಗರ್ಭಿಣ ಹತ್ಯೆ | ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು

ನಿಗಮದ ಕಚೇರಿಯಲ್ಲಿ ಈ ಹಿಂದೆ ಇದ್ದ ಇವಿ ಚಾರ್ಜಿಂಗ್‌ ಘಟಕದ ಸಾಮರ್ಥ್ಯವನ್ನು ಪ್ರಸ್ತುತ 30 ಕೆವಿ ಫಾಸ್ಟ್‌ ಚಾರ್ಜಿಂಗ್‌ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲಾಗಿದ್ದು, ಒಂದೇ ಸಮಯದಲ್ಲಿ ಎರಡು ಕಾರುಗಳನ್ನು ಚಾರ್ಜ್ ಮಾಡಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಇರುವುದರಿಂದ ಒಂದು ಕಾರನ್ನು 40ರಿಂದ 45 ನಿಮಿಷದಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಲು ಸಾಧ್ಯವಾಗುತ್ತದೆ.

“ಝಿಯಾನ್‌ ಎಲೆಕ್ಟ್ರಿಕ್‌ ಸಂಸ್ಥೆ ಸಹಯೋಗದೊಂದಿಗೆ ನೂತನ ಇವಿ ಚಾರ್ಜಿಂಗ್ ಘಟಕ ಆರಂಭಿಸಿದ್ದು, ಝಿಯಾನ್ ಆ್ಯಪ್ ಮೂಲಕ ಚಾರ್ಜಿಂಗ್‌ ಹಬ್‌ ಬಳಸಬಹುದು. ಹೊಸದಾಗಿ ಆರಂಭಿಸಿರುವ ಇವಿ ಚಾರ್ಜಿಂಗ್‌ ಘಟಕವನ್ನು ಪ್ರಾಯೋಗಿಕವಾಗಿ ಸೆಸ್ಕ್ ಕಚೇರಿಯ ಇವಿ ವಾಹನಗಳ ಬಳಕೆಗೆ ಮಾತ್ರವೇ ಸೀಮಿತಗೊಳಿಸಲಾಗಿದೆ. ಇದರ ಕಾರ್ಯಕ್ಷಮತೆ, ನಿರ್ವಹಣೆ ಮತ್ತು ಬಳಕೆಯ ಅನುಭವವನ್ನು ಪರಿಶೀಲಿಸಿದ ಬಳಿಕ ಮುಂದಿನ ದಿನಗಳಲ್ಲಿ ಸಾರ್ವಜನಿಕ ಬಳಕೆಗೆ ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ನಿಗಮವು ಚಿಂತನೆ ನಡೆಸಿದೆ.

ಈ ಸಂದರ್ಭದಲ್ಲಿ ಸೆಸ್ಕ್‌ ತಾಂತ್ರಿಕ ನಿರ್ದೇಶಕರಾದ ಡಿ.ಜೆ.ದಿವಾಕರ್,‌ ಮುಖ್ಯ ಪ್ರಧಾನ ವ್ಯವಸ್ಥಾಪಕ(ತಾಂತ್ರಿಕ)ರಾದ ಶರಣಮ್ಮ ಎಸ್‌. ಜಂಗಿನ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಪ್ರಧಾನ ವ್ಯವಸ್ಥಾಪಕರಾದ ಎನ್.ಆರ್.‌ ತಸ್ನೀಂ ತಬಸ್ಸುಂ, ಆರ್‌. ರಾಮಸ್ವಾಮಿ, ಎಚ್‌.ಆರ್. ದಿನೇಶ್‌ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago