ಮೈಸೂರು: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಮುಖ್ಯಮಂತ್ರಿ ಖುರ್ಚಿ ಫೈಟ್ ಶುರುವಾಗಿದ್ದು, ಡಿಕೆಶಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಒಕ್ಕಲಿಗರು ಶಕ್ತಿ ಪ್ರದರ್ಶನ ನಡೆಸಿದರು.
ಒಂಟಿಕೊಪ್ಪಲಿನ ಚಂದ್ರಮೌಳೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಡಿ.ಕೆ.ಶಿವಕುಮಾರ್ ಬೆಂಬಲಿಗರು, ಬೇಕೇ ಬೇಕು ನ್ಯಾಯ ಬೇಕು ಎಂದು ಘೋಷಣೆ ಕೂಗಿದರು. ನೂರಾರು ಬೈಕ್‌ಗಳಲ್ಲಿ ಆಗಮಿಸಿದ ಡಿಕೆಶಿ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದರು.
ಬಳಿಕ ಚಂದ್ರಮೌಳೇಶ್ವರನಿಗೆ ಪೂಜೆ ಸಲ್ಲಿಸಿ ಬೈಕ್ ಜಾಥಾಗೆ ಚಾಲನೆ ನೀಡಿದ ಬಳಿಕ ಡಿಕೆಶಿ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿಗಳು, ಮೈಸೂರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಜಾಥಾ ಕೈಗೊಂಡು, ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಲೇಬೇಕೆಂದು ಆಗ್ರಹಿಸಿದರು.
ಜಾಥಾದಲ್ಲಿ ಒಕ್ಕಲಿಗ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಡಿಕೆ ಅಭಿಮಾನಿಗಳು ಭಾಗಿಯಾಗಿದ್ದರು.





