ಮೈಸೂರು ನಗರ

ಮೈಸೂರು| ಡಿಕೆಶಿಗೆ ಸಿಎಂ ಸ್ಥಾನ ನೀಡುವಂತೆ ಒಕ್ಕಲಿಗರ ಶಕ್ತಿ ಪ್ರದರ್ಶನ

ಮೈಸೂರು: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಮುಖ್ಯಮಂತ್ರಿ ಖುರ್ಚಿ ಫೈಟ್‌ ಶುರುವಾಗಿದ್ದು, ಡಿಕೆಶಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಒಕ್ಕಲಿಗರು ಶಕ್ತಿ ಪ್ರದರ್ಶನ ನಡೆಸಿದರು.

ಒಂಟಿಕೊಪ್ಪಲಿನ ಚಂದ್ರಮೌಳೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಡಿ.ಕೆ.ಶಿವಕುಮಾರ್‌ ಬೆಂಬಲಿಗರು, ಬೇಕೇ ಬೇಕು ನ್ಯಾಯ ಬೇಕು ಎಂದು ಘೋಷಣೆ ಕೂಗಿದರು. ನೂರಾರು ಬೈಕ್‌ಗಳಲ್ಲಿ ಆಗಮಿಸಿದ ಡಿಕೆಶಿ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದರು.

ಬಳಿಕ ಚಂದ್ರಮೌಳೇಶ್ವರನಿಗೆ ಪೂಜೆ ಸಲ್ಲಿಸಿ ಬೈಕ್ ಜಾಥಾಗೆ ಚಾಲನೆ ನೀಡಿದ ಬಳಿಕ ಡಿಕೆಶಿ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿಗಳು, ಮೈಸೂರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಜಾಥಾ ಕೈಗೊಂಡು, ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನ ನೀಡಲೇಬೇಕೆಂದು ಆಗ್ರಹಿಸಿದರು.

ಜಾಥಾದಲ್ಲಿ ಒಕ್ಕಲಿಗ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಡಿಕೆ ಅಭಿಮಾನಿಗಳು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ವಾಣಿಜ್ಯ ಅನಿಲ ಅಭಾವ : ಕೆಲ ಹೋಟೆಲ್‌ಗಳು ಬಂದ್

ಮಧ್ಯಪ್ರಾಚ್ಯ ಯುದ್ಧದ ಬಿಸಿಗೆ ನಲುಗಿದ ಮೈಸೂರು ಹೋಟೆಲ್‌ಗಳು ಸೌದೆ ಒಲೆಗೆ ಮೊರೆ ಹೋದ ನ್ಯೂ ಲಕ್ಷ್ಮಿ ಭವನ; ಅನಿಲದ ಹಂಗಿಲ್ಲದ…

21 mins ago

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

11 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

11 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

11 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

11 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

12 hours ago