ಮೈಸೂರು: ಮೈಸೂರಿನಲ್ಲಿ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನ ಮುಂದುವರಿದಿದ್ದು, ಇಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗಿಯಾಗಿದ್ದ ಕೈ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಮೈಸೂರು| ಮುಂದುವರೆದ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನ
ವೋಟ್ ಚೋರಿಯಿಂದಲೇ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿದ ನಾಯಕರು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನದಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ, ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ, ಮಾಜಿ ಉಪ ಮೇಯರ್ ಸಿದ್ದರಾಜು, ಹೆಚ್.ವಿ.ರಾಜೀವ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.





