ಮೈಸೂರು ನಗರ

ಮೈಸೂರು ವಿ.ವಿಯಲ್ಲಿ 50 ವಿಷಯಗಳಿಗೆ ಅತಿಥಿ ಉಪನ್ಯಾಸಕರ ನೇಮಕ: ನೇರ ಸಂದರ್ಶನ, ಪಿಜಿ ಆದವರಿಗೂ ಅವಕಾಶ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಲ್ಲಿನ ಸ್ನಾತಕ ವಿಷಯಗಳ (ಖಾಯಂ ಅಧ್ಯಾಪಕರ ಭೋಧನಾ ಕಾರ್ಯಭಾರ ಹೊರತುಪಡಿಸಿ) ಹೆಚ್ಚುವರಿ ಬೋಧನಾ ಕಾರ್ಯಭಾರವನ್ನು ನಿರ್ವಹಿಸಲು ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.

ವಿವಿಯಲ್ಲಿರುವ 50 ವಿಷಯಗಳಿಗೂ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ನೆಟ್-ಕೆಸೆಟ್‌, ಪಿಎಚ್‌ಡಿ ಪಡೆದವರು ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ.50 ರಷ್ಟು ಅಂಕಗಳಿಸಿ ಉತ್ತೀರ್ಣರಾದವರೂ ಸಹ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಸಂದರ್ಶನವು ಆಗಸ್ಟ್ 6 ರಿಂದ 9 ರವರೆಗೆ ಮತ್ತು ಆಗಸ್ಟ್ 12 ರಂದು ನಡೆಯಲಿದೆ. ಇದಕ್ಕೆ ಸಂಬoಧಿಸಿದoತೆ ಸಂಪೂರ್ಣ ವಿವರ ಹಾಗೂ ನಿಗಧಿಪಡಿಸಿದ ದಿನಾಂಕಗಳಲ್ಲಿ ಬದಲಾವಣೆಯ ಬಗ್ಗೆ ಮಾಹಿತಿಗಾಗಿ www.uni-mysore.ac.in ಸಂಪರ್ಕಿಸಬಹುದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಸಚಿವರು(ಸಿಬ್ಬಂದಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಮೃಗಾಲಯದ ಹುಲಿ ʼಪೃಥ್ವಿʼ ಇನ್ನಿಲ್ಲ

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…

24 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಏಪ್ರಿಲ್‌ 9  

55 mins ago

ಕೇರಳ,ಪುದುಚೇರಿ,ಅಸ್ಸಾಂ ವಿಧಾನಸಭಾ ಚುನಾವಣೆ : ಮತದಾನ ಆರಂಭ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…

1 hour ago

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…

2 hours ago

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

11 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

14 hours ago