ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಲ್ಲಿನ ಸ್ನಾತಕ ವಿಷಯಗಳ (ಖಾಯಂ ಅಧ್ಯಾಪಕರ ಭೋಧನಾ ಕಾರ್ಯಭಾರ ಹೊರತುಪಡಿಸಿ) ಹೆಚ್ಚುವರಿ ಬೋಧನಾ ಕಾರ್ಯಭಾರವನ್ನು ನಿರ್ವಹಿಸಲು ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ವಿವಿಯಲ್ಲಿರುವ 50 ವಿಷಯಗಳಿಗೂ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ನೆಟ್-ಕೆಸೆಟ್, ಪಿಎಚ್‌ಡಿ ಪಡೆದವರು ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ.50 ರಷ್ಟು ಅಂಕಗಳಿಸಿ ಉತ್ತೀರ್ಣರಾದವರೂ ಸಹ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಸಂದರ್ಶನವು ಆಗಸ್ಟ್ 6 ರಿಂದ 9 ರವರೆಗೆ ಮತ್ತು ಆಗಸ್ಟ್ 12 ರಂದು ನಡೆಯಲಿದೆ. ಇದಕ್ಕೆ ಸಂಬoಧಿಸಿದoತೆ ಸಂಪೂರ್ಣ ವಿವರ ಹಾಗೂ ನಿಗಧಿಪಡಿಸಿದ ದಿನಾಂಕಗಳಲ್ಲಿ ಬದಲಾವಣೆಯ ಬಗ್ಗೆ ಮಾಹಿತಿಗಾಗಿ www.uni-mysore.ac.in ಸಂಪರ್ಕಿಸಬಹುದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಸಚಿವರು(ಸಿಬ್ಬಂದಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…