ಮೈಸೂರು ನಗರ

ನೆದರ್‌ಲ್ಯಾಂಡ್‌ ಸೊಸೆಯಾದ ಮೈಸೂರಿನ ಯುವತಿ

ಮೈಸೂರು: ಇಲ್ಲಿನ ವಿಜಯನಗರದ ಕಲ್ಯಾಣ ಮಂಟಪದಲ್ಲಿಂದು ಹೂಟಗಳ್ಳಿಯ ವಿದ್ಯಾ ಹಾಗೂ ನೆದರ್‌ಲ್ಯಾಂಡ್‌ ರುಟ್ಗೆರ್‌ ವಚನ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ವಿದ್ಯಾ ಪೋಷಕರಾದ ಸೋಮಶೇಖರಪ್ಪ ಮತ್ತು ಪ್ರೇಮಾ ಹಾಗೂ ರುಟ್ಗೆರ್‌ ಪೋಷಕರಾದ ಬಾಬ್‌ವಾನ್‌ ಬೊ ಇಜೆನ್‌ ಮತ್ತು ಜಾಕ್ವಿಲಿನ್‌ ಕನ್ನಡ ಮತ್ತು ಇಂಗ್ಲೀಷಿನಲ್ಲಿ ವಚನಗಳನ್ನು ಸ್ತುತಿಸಿ ವಿವಾಹಕ್ಕೆ ಒಪ್ಪಿಗೆ ನೀಡಿದರು.

ವರ ವಧುವಿಗೆ ಮಾಂಗ್ಯಧಾರಣೆ ಮಾಡಿದರೆ, ವಧು ವರನಿಗೆ ರುದ್ರಾಕ್ಷಿ ಧಾರಣೆ ಮಾಡುವ ಮೂಲಕ ಸಮಾನತೆಯ ತತ್ವಕ್ಕೆ ವಚನ ಮಾಂಗಲ್ಯ ಸಾಕ್ಷಿಯಾಯಿತು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರಣು ವಿಶ್ವವಚನ ಫೌಂಡೇಶನ್‌ ಸಂಸ್ಥಾಪಕರಾದ ವಚನ ಕುಮಾರಸ್ವಾಮಿ ಮತ್ತು ರೂಪಾ ಕುಮಾರಸ್ವಾಮಿ ವಚನ ಪ್ರತಿಜ್ಞೆ ಬೋಧಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

13 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago