ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದು ಮೋದಿ ಸರ್ಕಾರದ ವೈಫಲ್ಯ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿರುವುದು ಬಿಜೆಪಿ ಸರ್ಕಾರವೇ. ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಸ್ಥಳಕ್ಕೆ ಸಂಸದ ಯದುವೀರ್ ಒಡೆಯರ್ ಅವರು ಬರಲೇಬೇಕು ಎಂದು ಪಟ್ಟು ಹಿಡಿದು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…