ಮೈಸೂರು ನಗರ

ನಾಳೆಯಿಂದ ಮೈಸೂರು ಮೃಗಾಲಯದ ಪ್ರವೇಶ ದರ ಹೆಚ್ಚಳ

ಮೈಸೂರು: ಇತ್ತೀಚೆಗೆ ಜರ್ಮನ್, ಆಫ್ರಿಕಾದಿಂದ ತಂದಿರುವ ಹಂಟರ್ ಗೊರಿಲ್ಲಾ, ಚೀತಾ, ಜಾಗ್ವಾರ್ ಸೇರಿದಂತೆ ಅನೇಕ ಪ್ರಾಣಿಗಳನ್ನು ಸಾಕುವ ವೆಚ್ಚ ಬಲು ದುಬಾರಿಯಾದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಮೃಗಾಲಯದ ದರವನ್ನು ಏರಿಕೆ ಮಾಡಲಾಗುತ್ತಿದೆ ಎಂದು ಮೃಗಾಲಯ ಕಾರ್ಯನಿರ್ವಾಹಕ ಅಧಿಕಾರಿ ರಂಗಸ್ವಾಮಿ ಹೇಳಿದ್ದಾರೆ.

ನಾಳೆಯಿಂದ ಮೈಸೂರು ಮೃಗಾಲಯದ ಪ್ರವೇಶ ದರ ಶೇಡಕಾ.20 ರಷ್ಟು ಹೆಚ್ಚಳವಾಗಲಿದೆ. ನಾಲ್ಕು ವರ್ಷಗಳ ನಂತರ ದರ ಪರಿಷ್ಕರಣೆ ಮಾಡಲಾಗಿದ್ದು, ವಯಸ್ಕರಿಗೆ 100ರೂ ಇದ್ದ ಟಿಕೆಟ್ ದರ 120 ರೂಗೆ ಏರಿಕೆಯಾಗಿದೆ. ಮಕ್ಕಳಿಗೆ 50 ರೂ ಇದ್ದ ದರ 60ಕ್ಕೆ ಏರಿಕೆಯಾಗಿದೆ. ಮೃಗಾಲಯ, ಕಾರಂಜಿ ಕಾಂಬೋಗೆ ವಯಸ್ಕರಿಗೆ 150 ರೂ ನಿಗದಿಯಾಗಿದ್ದು, ಮಕ್ಕಳಿಗೆ 80 ರೂ ನಿಗದಿ ಮಾಡಲಾಗಿದೆ.

ಈ ಕುರಿತು ಮಾತನಾಡಿದ ಮೃಗಾಲಯ ಕಾರ್ಯನಿರ್ವಾಹಕ ಅಧಿಕಾರಿ ರಂಗಸ್ವಾಮಿ ಅವರು, ಒಂದು ದಿನಕ್ಕೆ ಮೃಗಾಲಯದ ನಿರ್ವಹಣೆಗೆ ಸುಮಾರು 9 ಲಕ್ಷ ಖರ್ಚಾಗುತ್ತಿದೆ. ಮೃಗಾಲಯದ ಪ್ರಾಣಿಗಳ ಖರ್ಚುವೆಚ್ಚ ತುಟ್ಟಿಯಾಗಿರುವ ಹಿನ್ನೆಲೆಯಲ್ಲಿ ನಾಲ್ಕು ವರ್ಷಗಳ ಬಳಿಕ ಮೃಗಾಲಯದ ಪ್ರವೇಶ ದರದಲ್ಲಿ ಏರಿಕೆ ಮಾಡಲಾಗಿದೆ. ಇತ್ತೀಚೆಗೆ ಜರ್ಮನ್, ಆಫ್ರಿಕಾದಿಂದ ತಂದಿರುವ ಹಂಟರ್ ಗೊರಿಲ್ಲಾ, ಚೀತಾ, ಜಾಗ್ವಾರ್ ಸೇರಿದಂತೆ ಪ್ರಾಣಿಗಳನ್ನು ಸಾಕುವ ವೆಚ್ಚ ದುಬಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ದರ ಏರಿಕೆ ಮಾಡಲಾಗುತ್ತಿದೆ. ಆದ್ದರಿಂದ ಪ್ರವಾಸಿಗರು ದರ ಏರಿಕೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

4 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

4 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

4 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

4 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

6 hours ago