ಮೈಸೂರು ನಗರ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ ‘ ಪೃಥ್ವಿ ಇನ್ನು ನೆನಪು ಮಾತ್ರ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 13 ವರ್ಷದ ಗಂಡು ಹುಲಿ ಪೃಥ್ವಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ.

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಇಂದು ಶೋಕದ ವಾತಾವರಣ ಮನೆಮಾಡಿದೆ, ಮೃಗಾಲಯದ ಅಂದವನ್ನು ಹೆಚ್ಚಿಸಿದ್ದ ಮೈಬಣ್ಣದ ವೈಭವದಿಂದ ಪ್ರವಾಸಿಗರ ಕಣ್ಮನ ಸೆಳೆಯುತ್ತಿದ್ದ 13 ವರ್ಷದ ಗಂಡು ಹುಲಿ ಪೃಥ್ವಿ ಅಗಲಿಕೆಯ ನೋವನ್ನು ಅನುಭವಿಸುತ್ತಿದೆ. ಕಳೆದ ಕೆಲ ದಿನಗಳಿಂದ ಈ ಹುಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಿತ್ತು Congenital Paresis‌ ಎಂಬ ಹುಟ್ಟಿನಿಂದ ಬಂದ ನರ ದೌರ್ಬಲ್ಯದ ಸಮಸ್ಯೆಯಿಂದಾಗಿ ಪೃಥ್ವಿ ಚಲನವಲನ ಮಾಡಲು ಪರದಾಡುತ್ತಿತ್ತು. ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯ ಹೆಚ್ಚಿದ ವಿಷಯ ತಿಳಿಯುತ್ತಿದ್ದಂತೆಯೇ ಮೃಗಾಲಯದ ಪಶುವೈದ್ಯರ ತಂಡ ಹುಲಿಯ ಆರೋಗ್ಯದ ಮೇಲೆ ನಿಗಾ ಇಟ್ಟಿತ್ತು. ಆದರೆ ವೈದ್ಯರ ಸತತ ಪ್ರಯತ್ನವನ್ನೂ ಮೀರಿ ಇಂದು ಪೃಥ್ವಿ ಮೃಗಾಲಯದಲ್ಲಿ ಅಸುನೀಗಿದೆ.

ಹುಲಿಯ ಮರಣದ ಕುರಿತು ಅಧಿಕೃತ ಪ್ರಕಟಣೆ ನೀಡಿರುವ ಮೃಗಾಲಯ ಆಡಳಿತ ಮಂಡಳಿ ಪೃಥ್ವಿಗೆ ಅತ್ಯುತ್ತಮ ಚಿಕಿತ್ಸೆ ನೀಡಲು ಪ್ರಯತ್ನಿಸಲಾಗಿತ್ತು‌. ಆದರೆ ದುರದೃಷ್ಟವಶಾತ್ ಅದು ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದೆ. 13 ವರ್ಷಗಳ ಕಾಲ ಮೈಸೂರು ಮೃಗಾಲಯದ ಶೋಭೆಯಾಗಿದ್ದ ಪೃಥ್ವಿ ಈಗ ಪ್ರಾಣಿಪ್ರಿಯರ ಪಾಲಿಗೆ ನೀಗದ ನೋವನ್ನು ನೀಡಿ ಮರೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

29 mins ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

32 mins ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

2 hours ago

ವರದಿ ಬಿಟ್ಟು ಕ್ಷೇತ್ರ ಭೇಟಿ ಮಾಡಿ : ಅಧಿಕಾರಿಗಳಿಗೆ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…

2 hours ago

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…

3 hours ago

ಪಶ್ಚಿಮ ಬಿಕ್ಕಟ್ಟು : ಸಂಘರ್ಷ ಸಂಧಾನ ಸಭೆ ಮುಂದೂಡಿಕೆ?

ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…

3 hours ago