ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ
ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ ‘ ಪೃಥ್ವಿ ಇನ್ನು ನೆನಪು ಮಾತ್ರ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 13 ವರ್ಷದ ಗಂಡು ಹುಲಿ ಪೃಥ್ವಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ.
ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಇಂದು ಶೋಕದ ವಾತಾವರಣ ಮನೆಮಾಡಿದೆ, ಮೃಗಾಲಯದ ಅಂದವನ್ನು ಹೆಚ್ಚಿಸಿದ್ದ ಮೈಬಣ್ಣದ ವೈಭವದಿಂದ ಪ್ರವಾಸಿಗರ ಕಣ್ಮನ ಸೆಳೆಯುತ್ತಿದ್ದ 13 ವರ್ಷದ ಗಂಡು ಹುಲಿ ಪೃಥ್ವಿ ಅಗಲಿಕೆಯ ನೋವನ್ನು ಅನುಭವಿಸುತ್ತಿದೆ. ಕಳೆದ ಕೆಲ ದಿನಗಳಿಂದ ಈ ಹುಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಿತ್ತು Congenital Paresis ಎಂಬ ಹುಟ್ಟಿನಿಂದ ಬಂದ ನರ ದೌರ್ಬಲ್ಯದ ಸಮಸ್ಯೆಯಿಂದಾಗಿ ಪೃಥ್ವಿ ಚಲನವಲನ ಮಾಡಲು ಪರದಾಡುತ್ತಿತ್ತು. ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯ ಹೆಚ್ಚಿದ ವಿಷಯ ತಿಳಿಯುತ್ತಿದ್ದಂತೆಯೇ ಮೃಗಾಲಯದ ಪಶುವೈದ್ಯರ ತಂಡ ಹುಲಿಯ ಆರೋಗ್ಯದ ಮೇಲೆ ನಿಗಾ ಇಟ್ಟಿತ್ತು. ಆದರೆ ವೈದ್ಯರ ಸತತ ಪ್ರಯತ್ನವನ್ನೂ ಮೀರಿ ಇಂದು ಪೃಥ್ವಿ ಮೃಗಾಲಯದಲ್ಲಿ ಅಸುನೀಗಿದೆ.
ಹುಲಿಯ ಮರಣದ ಕುರಿತು ಅಧಿಕೃತ ಪ್ರಕಟಣೆ ನೀಡಿರುವ ಮೃಗಾಲಯ ಆಡಳಿತ ಮಂಡಳಿ ಪೃಥ್ವಿಗೆ ಅತ್ಯುತ್ತಮ ಚಿಕಿತ್ಸೆ ನೀಡಲು ಪ್ರಯತ್ನಿಸಲಾಗಿತ್ತು. ಆದರೆ ದುರದೃಷ್ಟವಶಾತ್ ಅದು ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದೆ. 13 ವರ್ಷಗಳ ಕಾಲ ಮೈಸೂರು ಮೃಗಾಲಯದ ಶೋಭೆಯಾಗಿದ್ದ ಪೃಥ್ವಿ ಈಗ ಪ್ರಾಣಿಪ್ರಿಯರ ಪಾಲಿಗೆ ನೀಗದ ನೋವನ್ನು ನೀಡಿ ಮರೆಯಾಗಿದೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…