ಮೈಸೂರು: “ಮಹಾರಾಜ ಕಾಲೇಜು-ಒಂದು ಚಾರಿತ್ರಿಕ ಬೆಳವಣಿಗೆ (1833-1956)” ವಿಷಯಕ್ಕೆ ಸಂಬಂಧಿಸಿದಂತೆ ಸಂಶೋಧನೆ ನಡೆಸಿ ಮಾಹಿತಿಗಳನ್ನು ಗ್ರಂಥ ರೂಪದಲ್ಲಿ ಪ್ರಕಟಿಸಲು ಮೈಸೂರು ವಿಶ್ವವಿದ್ಯಾನಿಲಯವು ದಿ ಮಿಥಿಕ್ ಸೊಸೈಟಿಯೊಡನೆ ಒಡಂಬಡಿಕೆಗೆ ಸಹಿ ಹಾಕಿದೆ.
ಮಹಾರಾಜ ಕಾಲೇಜಿನ ಪ್ರಾಧ್ಯಾಪಕರುಗಳಾದ ಡಾ. ರೋಹಿತ ಈಶ್ವರ, ಡಾ. ಪವಮಾನ ಹಾಗೂ ಡಾ. ಗ್ಯಾವಿನ್ ಜೂಡ್ ವಿಲ್ಸನ್ ರವರು ಸಂಶೋಧನೆಯಲ್ಲಿದ್ದಾರೆ. ಇವರೊಂದಿಗೆ ಇತಿಹಾಸಕಾರರಾದ ಡಾ. ನರೇಂದ್ರ ಪ್ರಸಾದ್ ಇರಲಿದ್ದಾರೆ. ಭಾರತದ ಪತ್ರಗಾರ ಹಾಗೂ ಇತರ ಗ್ರಂಥಾಲಯಗಳಲ್ಲಿ ಲಭ್ಯವಿರುವ ಎಲ್ಲಾ ದಾಖಲಿತ ಮಾಹಿತಿಯ ಸಂಗ್ರಹಣೆ ಮಾಡಿ ಗ್ರಂಥ ರಚಿಸಲಾಗುವುದು.
ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರಾದ ಎಂ.ಕೆ. ಸವಿತಾ, ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಅವರ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ ಹಾಕಿದರು. ಪರೀಕ್ಷಾ ಕುಲ ಸಚಿವರಾದ ಡಾ.ಎನ್.ನಾಗರಾಜು, ಹಣಕಾಸು ಅಧಿಕಾರಿ ರೇಖಾ ಉಪಸ್ಥಿತರಿದ್ದರು.
ಮಿಥಿಕ್ ಸೊಸೈಟಿಯ ಗೌರವ ಕಾರ್ಯದರ್ಶಿ ಡಾ.ಎಸ್ ರವಿ ಅವರು ಮಿಥಿಕ್ ಸೊಸೈಟಿಯ ಪರವಾಗಿ ಒಡಂಬಡಿಕೆಗೆ ಸಹಿ ಹಾಕಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…