ಮೈಸೂರು ನಗರ

ಮೈಸೂರು| ರಂಗೋಲಿಯಲ್ಲಿ ಅರಳಿದ ಅಪ್ಪು: ಅಶ್ವಿನಿ ಶ್ಲಾಘನೆ

ಪ್ರಶಾಂತ್ ಎನ್ ಮಲ್ಲಿಕ್, ಮೈಸೂರು

ಮೈಸೂರು: ಕನ್ನಡ ಚಿತ್ರರಂಗದ ಮೇರು ನಟ ಪುನೀತ್ ರಾಜಕುಮಾರ್ ಅವರನ್ನು ಭೇಟಿಯಾಗಬೇಕು ಎಂಬ ಬಯಕೆ ಎಲ್ಲರಿಗೂ ಇದ್ದೇ ಇರುತ್ತಿತ್ತು, ಆದರೆ ಅವರು ಮರಣ ಹೊಂದಿದ್ದಾರೆ. ಈಗ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿ ಯಾದರೆ ತಮ್ಮ ಮೆಚ್ಚಿನ ನಟನನ್ನು ನೋಡಿದಷ್ಟು ಅನುಭವ ಅಭಿಮಾನಿಗಳಿಗೆ ಆಗುತ್ತದೆ. ಅದರಂತೆ ಮೈಸೂರಿನ ಚಿತ್ರಕಲಾ ತಂಡದವರು ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಮೈಸೂರಿನ ಪುನೀತ್ ಹಾಗೂ ಅವರ ರಂಗೋಲಿ ಕಲೆಗೆ ಜೊತೆಗೂಡಿ ಕೆಲಸವನ್ನು ಮಾಡುತ್ತಿರುವ ಕಲಾವಿದರು ಭೇಟಿಯಾಗಿದ್ದರು.

ಕೆಲವು ದಿನಗಳ ಹಿಂದೆ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಸುಮಾರು 8200 ಎತ್ತರದ ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಮೂರು ದಿನಗಳ ಕಾಲ ಪರಿಶ್ರಮ ದಿಂದ ಬಣ್ಣ ಬಣ್ಣದ ರಂಗೋಲಿ ಮೂಲಕ ಬಿಡಿಸಿದ್ದರು. ಅದನ್ನು ವರ್ಡ್ ಗಿನ್ನಿಸ್ ರೆಕಾರ್ಡ್ ದಾಖಲೆಗೂ ಕಳುಹಿಸಿದ್ದಾರೆ.

ಈ ತಂಡವು ಪ್ರತಿಷ್ಟಿತ ಗಣ್ಯ ವ್ಯಕ್ತಿಗಳ ಬಾವಚಿತ್ರವನ್ನು ರಂಗೋಲಿಯಲ್ಲಿ ಬಿಡಿಸಿ ಜನರ ಮೆಚ್ಚುಗೆಗೂ ಸಹ ಪಾತ್ರರಾಗಿದ್ದಾರೆ. ಅದರ ಜೊತೆಗೆ ಪುನೀತ್ ರಾಜಕುಮಾರ್ ಅವರ ಕುಟುಂಬದ ಭಾವಚಿತ್ರವನ್ನು ಬಿಡಿಸಿ ಅಶ್ವಿನಿ ಅವರಿಗೆ ಭಾವಚಿತ್ರವನ್ನು ನೀಡಿದ್ದಾರೆ.

ರಂಗೋಲಿಯಲ್ಲಿ ಮೂಡಿದ ಪುನೀತ್ ರಾಜಕುಮಾರ್ ಅವರ ಬಾವಚಿತ್ರವನ್ನು ನೋಡಿ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಖುಷಿ ಪಟ್ಟು ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ. ಹಾಗೂ ಇದೇ ರೀತಿಯ ಒಳ್ಳೊಳ್ಳೆ ಚಿತ್ರಗಳು ಮೂಡಿ ಬರಲಿ ಎಂದು ಪುನೀತ್ ಕಲಾವಿದರ ತಂಡ ಸಾಧನೆ ಮಟ್ಟಕ್ಕೆ ಹೆರಲಿ ಎಂದು ಶುಭ ಹಾರೈಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

5 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

5 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

6 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

7 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

7 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

9 hours ago