ಮೈಸೂರು: ಸರ್ಕಾರಿ ಬಸ್‌ಗಳಲ್ಲಿ ವೋಟ್ ಚೋರಿ ಸ್ಟಿಕ್ಕರ್‌ಗಳನ್ನು ಅಂಟಿಸಿದ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ದೂರು ನೀಡಿದೆ.
ಈ ಕುರಿತು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ದೂರು ನೀಡಿರುವ ಮೈಸೂರು ನಗರ ಬಿಜೆಪಿ ಯುವಮೋರ್ಚಾ ಸದಸ್ಯರು, ಸರ್ಕಾರಿ ಬಸ್‌ಗಳಲ್ಲಿ ಈ ರೀತಿ ಸ್ಟಿಕ್ಕರ್ ಅಂಟಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಒಂದು ವೇಳೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಬಿಜೆಪಿ ಯುವ ಮೋರ್ಚಾದಿಂದಲೂ ಇದೇ ರೀತಿಯ ಅಭಿಯಾನ ಶುರು ಮಾಡುತ್ತೇವೆ ಎಂದು ಬಿಜೆಪಿ ಯುವ ಮೋರ್ಚಾ ಮೈಸೂರು ನಗರಾಧ್ಯಕ್ಷ ರಾಕೇಶ್ ಗೌಡ ಎಚ್ಚರಿಕೆ ನೀಡಿದ್ದಾರೆ.





