ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚಿನ ಬೃಹದಾಕಾರದ ಮರಗಳನ್ನು ಕಡಿದ ಪ್ರಕರಣ ಈಗ ಮೈಸೂರಿನಲ್ಲಿ ಭಾರೀ ಸದ್ದು ಮಾಡುತ್ತಿದೆ.
ಮೈಸೂರಿನ (Mysuru) ಎಸ್‌ಪಿ ಕಚೇರಿಯಿಂದ ಹೈದರ್ ಅಲಿ ರಸ್ತೆಯ ಕಾಳಿಕಾಂಬ ದೇವಾಲಯದವರೆಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಇದಕ್ಕಾಗಿ ಸುಮಾರು 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿದೆ. ಈ ಘಟನೆಯಿಂದ ಪರಿಸರ ಪ್ರೇಮಿಗಳು ಆಕ್ರೋಶಭರಿತರಾಗಿದ್ದಾರೆ.
ಸುದ್ದಿ ಹಿನ್ನೆಲೆ:- ಮೈಸೂರಿನಲ್ಲಿ ಮರಗಳ ಹನನ ; ಪರಿಸರ ಪ್ರೇಮಿಗಳ ಸಭೆಯಲ್ಲಿ ಮಹತ್ವದ ತೀರ್ಮಾನ?
ಈ ಬೆನ್ನಲ್ಲೇ ಮರಗಳನ್ನು ಕಡಿದು ಹಾಕಿರುವ ರಸ್ತೆಯಲ್ಲೇ ಇಂದು ರಾಜ್ಯ ರೈತ ಸಂಘದಿಂದ (Rajya Raitha Sangha) ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮರ ಕಡಿದ ಜಾಗದಲ್ಲೇ ರೈತರು ವಿವಿಧ ತಳಿಯ ಗಿಡ ನೆಟ್ಟು, ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಹಿಳೆಯರು ಸೇರಿದಂತೆ ವಿವಿಧ ಸಂಘಟನೆಗಳಿಂದಲೂ ಗಿಡ ನೆಡುವ ಅಭಿಯಾನ ಶುರುವಾಗಿದ್ದು, ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಹೆಚ್ಚಿನ ಮಾಹಿತಿ:- ಮೈಸೂರು। ಮರಗಳ ಮಾರಣಹೋಮ ಖಂಡಿಸಿ ಪುಟಾಣಿಗಳಿಂದ ಪ್ರತಿಭಟನೆ
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…