ಮೈಸೂರು ನಗರ

ಮೈಸೂರು| ಮರ ಕಡಿದ ಸ್ಥಳದಲ್ಲೇ ಗಿಡ ನೆಟ್ಟ ಅನ್ನದಾತರು

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚಿನ ಬೃಹದಾಕಾರದ ಮರಗಳನ್ನು ಕಡಿದ ಪ್ರಕರಣ ಈಗ ಮೈಸೂರಿನಲ್ಲಿ ಭಾರೀ ಸದ್ದು ಮಾಡುತ್ತಿದೆ.

ಮೈಸೂರಿನ (Mysuru) ಎಸ್‌ಪಿ ಕಚೇರಿಯಿಂದ ಹೈದರ್‌ ಅಲಿ ರಸ್ತೆಯ ಕಾಳಿಕಾಂಬ ದೇವಾಲಯದವರೆಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಇದಕ್ಕಾಗಿ ಸುಮಾರು 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿದೆ. ಈ ಘಟನೆಯಿಂದ ಪರಿಸರ ಪ್ರೇಮಿಗಳು ಆಕ್ರೋಶಭರಿತರಾಗಿದ್ದಾರೆ.

ಸುದ್ದಿ ಹಿನ್ನೆಲೆ:- ಮೈಸೂರಿನಲ್ಲಿ ಮರಗಳ ಹನನ ; ಪರಿಸರ ಪ್ರೇಮಿಗಳ ಸಭೆಯಲ್ಲಿ ಮಹತ್ವದ ತೀರ್ಮಾನ?

ಈ ಬೆನ್ನಲ್ಲೇ ಮರಗಳನ್ನು ಕಡಿದು ಹಾಕಿರುವ ರಸ್ತೆಯಲ್ಲೇ ಇಂದು ರಾಜ್ಯ ರೈತ ಸಂಘದಿಂದ (Rajya Raitha Sangha) ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮರ ಕಡಿದ ಜಾಗದಲ್ಲೇ ರೈತರು ವಿವಿಧ ತಳಿಯ ಗಿಡ ನೆಟ್ಟು, ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳೆಯರು ಸೇರಿದಂತೆ ವಿವಿಧ ಸಂಘಟನೆಗಳಿಂದಲೂ ಗಿಡ ನೆಡುವ ಅಭಿಯಾನ ಶುರುವಾಗಿದ್ದು, ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಹೆಚ್ಚಿನ ಮಾಹಿತಿ:- ಮೈಸೂರು। ಮರಗಳ ಮಾರಣಹೋಮ ಖಂಡಿಸಿ ಪುಟಾಣಿಗಳಿಂದ ಪ್ರತಿಭಟನೆ

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

4 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

8 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

8 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

8 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago