Mysore
24
few clouds
Light
Dark

ಈ ಬಾರಿ ಅತ್ಯಂತ ವಿಶೇಷವಾಗಿರಲಿದೆ ಮೈಸೂರು ದಸರಾ ದೀಪಾಲಂಕಾರ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಅತ್ಯಂತ ವಿಶೇಷವಾಗಿರಲಿದೆ.

ಈ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ರಮೇಶ್‌ ಬಂಡಿಸಿದ್ದೇಗೌಡ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ದಸರಾ ದೀಪಾಲಂಕಾರವನ್ನು ಇನ್ನಷ್ಟು ಚೆನ್ನಾಗಿ ಮಾಡಲು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಕಳೆದ ಬಾರಿಯಿಂದ ಈ ಬಾರಿಯ ದಸರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾಗಿ ಈ ಬಾರಿಯ ದಸರಾ ದೀಪಾಲಂಕಾರವನ್ನು ಸಹ ಆಕರ್ಷಣೀಯ ಹಾಗೂ ವಿನೂತನ ರೀತಿಯಲ್ಲಿ ಮಾಡಲು ಚಿಂತನೆ ನಡೆಸಲಾಗಿದೆ.

ದಸರಾ ದೀಪಾಲಂಕಾರದ ಆಕರ್ಷಣೆ ಹೆಚ್ಚಿಸುವುದರೊಂದಿಗೆ ಜನರ ಸುರಕ್ಷತೆಗೂ ಆದ್ಯತೆ ನೀಡಬೇಕೆಂದು ಮನವಿ ಮಾಡಲಾಗಿದೆ.

ಒಟ್ಟಿನಲ್ಲಿ ಈ ಬಾರಿಯ ದಸರಾವನ್ನು ವಿಭಿನ್ನ ಮತ್ತು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ದೀಪಾಲಂಕಾರವನ್ನು ಉತ್ತಮವಾಗಿಸಲು ಎಲ್ಲಾ ಪ್ರಯತ್ನಗಳು ನಡೆದಿವೆ. ಇದಕ್ಕೆ ಪ್ರಾಯೋಜಕರು ಹೆಚ್ಚಿನ ಸಹಕಾರ ನೀಡಿದರೆ ದೀಪಾಲಂಕಾರವನ್ನು ಹೆಚ್ಚು ಆಕರ್ಷಣೀಯವಾಗಿಸಬಹುದು ಎಂದು ಅಂದಾಜಿಸಲಾಗಿದೆ.