ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಅತ್ಯಂತ ವಿಶೇಷವಾಗಿರಲಿದೆ.
ಈ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ದಸರಾ ದೀಪಾಲಂಕಾರವನ್ನು ಇನ್ನಷ್ಟು ಚೆನ್ನಾಗಿ ಮಾಡಲು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.
ಕಳೆದ ಬಾರಿಯಿಂದ ಈ ಬಾರಿಯ ದಸರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾಗಿ ಈ ಬಾರಿಯ ದಸರಾ ದೀಪಾಲಂಕಾರವನ್ನು ಸಹ ಆಕರ್ಷಣೀಯ ಹಾಗೂ ವಿನೂತನ ರೀತಿಯಲ್ಲಿ ಮಾಡಲು ಚಿಂತನೆ ನಡೆಸಲಾಗಿದೆ.
ದಸರಾ ದೀಪಾಲಂಕಾರದ ಆಕರ್ಷಣೆ ಹೆಚ್ಚಿಸುವುದರೊಂದಿಗೆ ಜನರ ಸುರಕ್ಷತೆಗೂ ಆದ್ಯತೆ ನೀಡಬೇಕೆಂದು ಮನವಿ ಮಾಡಲಾಗಿದೆ.
ಒಟ್ಟಿನಲ್ಲಿ ಈ ಬಾರಿಯ ದಸರಾವನ್ನು ವಿಭಿನ್ನ ಮತ್ತು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ದೀಪಾಲಂಕಾರವನ್ನು ಉತ್ತಮವಾಗಿಸಲು ಎಲ್ಲಾ ಪ್ರಯತ್ನಗಳು ನಡೆದಿವೆ. ಇದಕ್ಕೆ ಪ್ರಾಯೋಜಕರು ಹೆಚ್ಚಿನ ಸಹಕಾರ ನೀಡಿದರೆ ದೀಪಾಲಂಕಾರವನ್ನು ಹೆಚ್ಚು ಆಕರ್ಷಣೀಯವಾಗಿಸಬಹುದು ಎಂದು ಅಂದಾಜಿಸಲಾಗಿದೆ.
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…