ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ.
ಅಕ್ಟೋಬರ್.3ರಂದು ಚಾಮುಂಡಿಬೆಟ್ಟದಲ್ಲಿ ಬೆಳಿಗ್ಗೆ 9.15ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ.
ಅಕ್ಟೋಬರ್.3ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ಅಕ್ಟೋಬರ್.12ರ ಶನಿವಾರ ಜಂಬೂಸವಾರಿ ನಡೆಯಲಿದೆ.
ಅಂದು ಸಂಜೆ 7ಕ್ಕೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಪಂಜಿನ ಕವಾಯತು ನಡೆಯಲಿದ್ದು, ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ.