ಮೈಸೂರು: ಆನೆಗಳಿಗೆ ಇಂದಿನಿಂದ ತಾಲೀಮು ಶುರುವಾಗಿದ್ದು, ಜಂಬೂ ಸವಾರಿ ಸಾಗುವ ಸಯ್ಯಾಜಿರಾವ್ ರಸ್ತೆಯಲ್ಲಿ ತಾಲೀಮು ನಡೆಸಲಾಗಿದೆ.
ಇಂದು ಬೆಳಿಗ್ಗೆ ತಾಲೀಮು ನಡೆಸಲಾಗಿದ್ದು, ಸಂಜೆಯೂ ಕೂಡ ತಾಲೀಮು ನಡೆಸಲಾಗುತ್ತದೆ. ಆನೆಗಳಿಗೆ ಶಕ್ತಿ ಬರಲೆಂದು ಮೊಳಕೆ ಕಾಳು, ಭತ್ತ, ಬೆಲ್ಲ, ಬೆಣ್ಣೆ ವಿವಿಧ ಬಗೆಯ ಸೊಪ್ಪುಗಳ ಜತೆಗೆ ಕೊಬ್ಬರಿ, ತೆಂಗಿನಕಾಯಿಯನ್ನು ಪ್ರತಿದಿನ ಎರಡು ಬಾರಿ ನೀಡಲಾಗುತ್ತದೆ.
ಅದರಲ್ಲೂ ಅಂಬಾರಿ ಹೊರುವ ಅಭಿಮನ್ಯುವಿಗೆ ವಿಶೇಷ ಆಹಾರದ ಜತೆಗೆ ಹೆಚ್ಚಿನ ಬೆಣ್ಣೆ, ಬೆಲ್ಲ ಹಾಗೂ ಕೊಬ್ಬರಿ, ಕಬ್ಬು ನೀಡಿ ಜಂಬೂ ಸವಾರಿಯ ವೇಳೆಗೆ ಮತ್ತಷ್ಟು ಬಲಶಾಲಿಯನ್ನಾಗಿ ಮಾಡಲಾಗುತ್ತದೆ.
ಈ ಮೂಲಕ ದಸರಾ ಜಗಪಡೆಗೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗುತ್ತದೆ. ಇದಕ್ಕಾಗಿ ಆನೆಗಳಿಗೆ ಫೌಷ್ಠಿಕ ಆಹಾರ ನೀಡಲಾಗುತ್ತದೆ.





