ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೇ ಆರಂಭವಾಗಿದ್ದು, ಸಕಲ ಸಿದ್ದತೆಗಳು ಕೂಡ ಬರದಿಂದ ಸಾಗಿದೆ. ಕಳೆದ ಬಾರಿಯಂತೆ ಈ ಬಾರಿ ಜಿಲ್ಲಾಡಳಿತವು ವಿಶೇಷವಾಗಿ ಡ್ರೋನ್ ಶೋ ನಡೆಸಲು ನಿರ್ಧರಿಸಿದೆ.
ಅಕ್ಟೋಬರ್ 6, 7, 11 ಮತ್ತು 12 ರಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ದಸರಾ ಡ್ರೋನ್ ಶೋ ನಡೆಯಲಿದೆ.
ಎರಡು ದಿನ ಉಚಿತ ಶೋ
ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ವೀಕ್ಷಿಸಲು ಅನೇಕ ಪ್ರವಾಸಿಗರು ಮೈಸೂರಿನತ್ತ ಮುಖ ಮಾಡುತ್ತಿದ್ದಾರೆ. ಈ ಮಧ್ಯೆಯೇ ಪ್ರವಾಸಿಗರನ್ನು ಆಕರ್ಷಿಸಲು 6 ಮತ್ತು 7 ರಂದು ರಾತ್ರಿ 8 ರಿಂದ 8.15 ರವರೆಗೆ ಉಚಿತ ಡ್ರೋನ್ ಶೋ ನಡೆಸಲು ತೀರ್ಮಾನಿಸಲಾಗಿದೆ.
ದಸರಾ ಮಹೋತ್ಸವ ಪ್ರಯುಕ್ತ ಯುವ ಸಂಭ್ರಮ, ಯುವ ದಸರಾ, ವಸ್ತು ಪ್ರದರ್ಶನ ಮತ್ತು ಆಹಾರ ಮೇಳದಂತೆ ಡ್ರೋನ್ ಶೋ ಸಹ ಜನತೆಯನ್ನು ಸೆಳೆಯುವ ಕಾರ್ಯಕ್ರಮವಾಗಿದೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…