ಮೈಸೂರು: ಕಳೆದ ಬಾರಿ ನಮಗೆ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. ಆದರೆ ಈ ಬಾರಿ ನಮ್ಮನ್ನು ಯಾರೂ ಕರೆದಿಲ್ಲ ಎಂದು ಮಂಗಳಮುಖಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಕಳೆದ ಬಾರಿ ನಮಗೆ ಯೋಗದಿನಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. ಕಳೆದ ವರ್ಷ ನಮಗೂ ಆಹ್ವಾನ ನೀಡಿದ್ದರು. ಆದರೆ ಈ ಬಾರಿ ನಮ್ಮನ್ನು ಯಾರು ಕರೆದಿಲ್ಲ. ಆಹ್ವಾನಿಸಿದ್ದರೆ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ವಿವಿಧ ಆಸನಗಳನ್ನು ಮಾಡುತ್ತಿದ್ದೆವು. ಈ ಬಾರಿ ಜಿಲ್ಲಾಡಳಿತ ನಮಗೆ ಆಹ್ವಾನ ನೀಡಲಿಲ್ಲ. ಅದಕ್ಕಾಗಿ ಈ ಬಾರಿ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿಲ್ಲ. ನಮಗೂ ಆಹ್ವಾನ ಬರಲಿದೆ ಎಂದು ಕಾಯುತ್ತಿದ್ದೆವು. ಆದರೆ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಈ ಬಾರಿಯ ಯೋಗ ದಿನಾಚರಣೆಯಲ್ಲಿ ಮೈಸೂರು ಜಿಲ್ಲಾಡಳಿತ ಮಂಗಳಮುಖಿಯರನ್ನು ಮರೆಯಿತಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದ್ದು, ಇದಕ್ಕೆ ಜಿಲ್ಲಾಡಳಿತವೇ ಉತ್ತರ ಕೊಡಬೇಕಿದೆ.
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…
ಬೆಂಗಳೂರು : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ…
ಬೆಂಗಳೂರು : ಉದ್ಯೋಗ ಮಾಡುವ ಮಹಿಳೆಯರಿಗೆ ಅತ್ಯುತ್ತಮ ನಗರ ಎಂಬ ಕೀರ್ತಿ ಬೆಂಗಳೂರಿಗೆ ಸಿಕ್ಕಿದೆ. ಮುಂಬೈ, ಚೆನ್ನೈ ಸೇರಿದಂತೆ 16…
ಬೆಂಗಳೂರು : ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ…