ಮೈಸೂರು: ದೇವನಹಳ್ಳಿಯ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿ ಹಲವು ರೈತರನ್ನು ಬಂಧಿಸಿರುವ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿಂದು ರೈತರು ಪ್ರತಿಭಟನೆ ನಡೆಸಿದರು.
ಕೈಗಾರಿಕಾಭಿವೃದ್ಧಿಗೆ ಬಲವಂತ ಭೂಸ್ವಾಧೀನ ವಿರುದ್ಧ ಸುಮಾರು 1177 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ಪ್ರತಿಭಟನಾ ನಿರತರನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರ ನಡೆಯನ್ನು ಖಂಡಿಸಿ ಮೈಸೂರಿನಲ್ಲಿಂದು ರೈತರು ಪ್ರತಿಭಟನೆ ನಡೆಸಿದರು.
ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ವಿವಿಧ ರೈತ ಪರ ಸಂಘಟನೆಗಳ ಮುಖಂಡರು ರಾಜ್ಯ ಸರ್ಕಾರ ಹಾಗೂ ಪೊಲೀಸರ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಸರ್ಕಾರ ಭೂಸ್ವಾಧೀನ ಆದೇಶ ಹಿಂಪಡೆಯಬೇಕು ಎಂದು ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಆದರೂ ಈ ಬಗ್ಗೆ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ. ಕೂಡಲೇ ಸರ್ಕಾರ ಭೂಸ್ವಾಧೀನ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.





