ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಯಿತು.
ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ ಆದೇಶ ಹೊರಡಿಸಲು ಸೂಚಿಸಿದರು. ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಮೊದಲ ಹಂತದ ಯೋಜನೆಯನ್ನು ಕೂಡಲೇ ಪ್ರಾರಂಭಿಸಲು ಸೂಚಿಸಿದ ಸಿಎಂ, 2015-16 ರಲ್ಲಿ ಆಯವ್ಯಯ ಘೋಷಣೆ ಮಾಡಲಾಗಿತ್ತು. ಆದರೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇದನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್ ಅಡ್ವೈಸರ್ ನೇಮಕ ಮಾಡಲು ಟೆಂಡರ್ ಕರೆಯುವಂತೆ ನಿರ್ದೇಶಿಸಿದರು.
ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರ ಮಾಡಿದ ನಂತರ ಪಿಪಿಪಿ ಮಾದರಿಯಲ್ಲಿ ಎಕ್ಸ್‌ಪ್ರೆಷನ್ ಆಫ್ ಇಂಟರೆಸ್ಟ್ ಕರೆಯಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಇಂದಿನ ಚಿತ್ರರಂಗಕ್ಕೆ ಅಗತ್ಯವಿರುವ ತಂತ್ರಜ್ಞಾನಗಳನ್ನೊಳಗೊಂಡ ಅತ್ಯಾಧುನಿಕ ಮಾದರಿಯ ಚಿತ್ರನಗರಿ ನಿರ್ಮಿಸಬೇಕು. ಚಿತ್ರನಗರಿಯಲ್ಲಿ ಥಿಯೇಟರ್, ಸ್ಟುಡಿಯೋ, ಮಲ್ಟಿಪ್ಲೆಕ್ಸ್, ಥೀಮ್ ಪಾರ್ಕ್, ಹೋಟೆಲ್‌ಗಳನ್ನೂ ನಿರ್ಮಿಸಲು ಸಿಎಂ ಸೂಚಿಸಿದರು.
ಟ್ರಾನ್ಸಾಕ್ಷನ್ ಅಡ್ವೈಸರ್ ನೇಮಕವಾದ ನಂತರ ಚಿತ್ರರಂಗದ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ, ಚಿತ್ರನಗರಿಯ ರೂಪುರೇಷೆಗಳನ್ನು ಅಂತಿಮಗೊಳಿಸಬೇಕು.
ಇದರಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು ಎಂದು ತಿಳಿಸಿದರು.
ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಚಿತ್ರ ಪ್ರವಾಸೋದ್ಯಮಕ್ಕೆ (Film Tourism) ಒತ್ತು ನೀಡಲು ಸಿಎಂ ಸೂಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್ ಚಂದ್ರ, ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಮಂಡ್ಯ: ನೈಸರ್ಗಿಕ ವಿಕೋಪಗಳಿಗೆ ಸಹಜವಾಗಿ ಆತಂಕ ಎಂಬ ಪದ ಬಳಕೆ ಸಾಮಾನ್ಯವಾಗಿದೆ. ಆತಂಕ ನಿವಾರಣೆಗೆ ಅದನ್ನು ಎದುರಿಸುವ ಮನಸ್ಥಿತಿಯನ್ನು ಅಳವಡಿಸಿ…
ನವದೆಹಲಿ/ನ್ಯೂಯಾರ್ಕ್: ವಿಶ್ವಸಂಸ್ಥೆಯ ಇಂಟರ್‌ನಲ್ ಜಸ್ಟೀಸ್ ಕೌನ್ಸಿಲ್‌ನ (ಆಂತರಿಕ ನ್ಯಾಯ ಮಂಡಳಿ) ಮುಖ್ಯಸ್ಥರಾಗಿ ಭಾರತದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮದನ್…
ಮಂಡ್ಯ: ಜಿಲ್ಲೆಯ ಚರಿತ್ರೆ, ಸಾಮಾಜಿಕ ವಿಚಾರ ನೋಡಿದರೆ ಹಲವಾರು ಪ್ರಥಮಗಳನ್ನು ಮಂಡ್ಯ ದಾಖಲಿಸಿದೆ. ಮೈಸೂರಿನಿಂದ ಪ್ರತ್ಯೇಕವಾದ ಮೇಲೂ ಹಲವು ಅದ್ಭುತಗಳನ್ನು…
ನವದೆಹಲಿ: ಡಾ.ಬಿ.ಆರ್.ಅಂಬೇಡ್ಕರ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸದನದಲ್ಲಿ ಅಗೌರವದ ಹೇಳಿಕೆ ನೀಡಿರುವುದಕ್ಕೆ ದೇಶಾದ್ಯಂತ ಆಕ್ರೋಶ…
ದೇಶಿಯ ಮಿನಿ ಚುಟುಕು ಕ್ರಿಕೆಟ್ ಟೂರ್ನಿಗಳಲ್ಲಿ ಯಶಸ್ಸು ಕಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್), ಸೀಸನ್ 18ರ ಆರಂಭಕ್ಕೆ ದಿನಾಂಕ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಎಂಎಲ್‌ಸಿ ಸಿ.ಟಿ.ರವಿ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಅಗತ್ಯವಾಗಿ ಕಾನೂನು…