ಮೈಸೂರು: ಹಳೆ ಕೆಸರೆ ಗ್ರಾಮದ ಬಳಿ ಇರುವ ಘನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ತ್ಯಾಜ್ಯ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಇಂದು ಬೆಳ್ಳಂಬೆಳಿಗ್ಗೆ ಘನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾರ ಪ್ರಮಾಣದ ತ್ಯಾಜ್ಯ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ.





